ದುಬೈ: ದುಬೈನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಡಾ. ಸುಧಾಮೂರ್ತಿ ಅವರಿಗೆ ಕನ್ನಡ ರತ್ನ ಹಾಗೂ ವೀರ ಯೋಧ ಕ್ಯಾ. ನವೀನ್ ನಾಗಪ್ಪ ಅವರಿಗೆ ವೀರ ಯೋಧ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.ದುಬೈ ಕನ್ನಡಿಗರು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ದುಬೈ ಕನ್ನಡಿಗರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿದರು.

