newsics.com
ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ಬಂಧನವಾಗಿದೆ.
ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಜ್ವಲ್ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಯಿತು.
ವೈದ್ಯಕೀಯ ಪರೀಕ್ಷೆಗಾಗಿ ಸೂರಜ್ನನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದ್ದು, ವಿಚಾರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಂಎಲ್ಸಿ ಸೂರಜ್ ರೇವಣ್ಣರ ಪ್ರಕರಣ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಹಾಸನದ ಹೊಳೆನರಸೀಪುರದ ಗ್ರಾಮಾಂತರ ಠಾಣೆಯಲ್ಲಿ ಶನಿವಾರ ಸಂಜೆ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಐಪಿಸಿ ಸೆಕ್ಷನ್ 377, 342, 506 ಅಡಿ ಕೇಸ್ ದಾಖಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ.
ಮಳೆಗಾಲ ಶುರುವಾಗಿದೆ… ಇದು ಶೀತ- ಕೆಮ್ಮಿನ ಸಮಯ, ಮನೆಯಲ್ಲೇ ಮಾಡಿ ಕುಡಿಯಿರಿ ಕಷಾಯ