ಮಳೆಗೆ ಮಹಾರಾಷ್ಟ್ರ ತತ್ತರ, ಜನಜೀವನ ಅಸ್ತವ್ಯಸ್ತ, ಪುಣೆಯಲ್ಲಿ ನಾಲ್ವರ ಸಾವು

newsics.com ಮುಂಬೈ/ಪುಣೆ(ಮಹಾರಾಷ್ಟ್ರ): ಮಹಾರಾಷ್ಟ್ರದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಪುಣೆಯಲ್ಲಿ ಮಹಾಮಳೆಗೆ ನಾಲ್ವರು ಸಾವನ್ನಪ್ಪಿದ್ದಾರೆ. ಮುಂಬೈನ ಬಹುತೇಕ ಕಡೆ ರಸ್ತೆಗಳಲ್ಲಿ ನೀರು ತುಂಬಿಕೊಂಡ, ರಸ್ತೆಗಳಲ್ಲೇ ನೀರು ಹರಿಯುತ್ತಿರುವ ದೃಶ್ಯ ಕಂಡುಬಂದಿದೆ. ಮತ್ತೊಂದೆಡೆ ಸ್ಥಳೀಯ ರೈಲು ಸೇವೆಗಳಲ್ಲೂ ವ್ಯತ್ಯಯವಾದ ಕಾರಣ ಲಕ್ಷಾಂತರ ಜನರು ಸಮಸ್ಯೆ ಅನುಭವಿಸಿದರು. ವಿಮಾನ ಹಾರಾಟದಲ್ಲೂ ವ್ಯತ್ಯಯ ಉಂಟಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಬೈ ಮತ್ತು ಉಪನಗರಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಪರಿಣಾಮ, ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ … Continue reading ಮಳೆಗೆ ಮಹಾರಾಷ್ಟ್ರ ತತ್ತರ, ಜನಜೀವನ ಅಸ್ತವ್ಯಸ್ತ, ಪುಣೆಯಲ್ಲಿ ನಾಲ್ವರ ಸಾವು