newsics.com
ಮೈಸೂರು: ನನಗೀಗ 82 ವರ್ಷ ವಯಸ್ಸಾಗಿದೆ, ಇನ್ನೂ ಕೈ-ಕಾಲು ಗಟ್ಟಿ ಇವೆ. ರಾಜ್ಯದ ಉದ್ದಗಲಕ್ಕೂ ಓಡಾಡಿ ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಮನೆ ಸೇರಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕೈ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಕೊನೆ ಉಸಿರು ಇರುವವರೆಗೂ ರಾಜಕೀಯ ಮಾಡ್ತೀನಿ. ನಿಮಗೆ ತಾಕತ್ ಇದೆಯಾ, ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸುತ್ತೀರಾ ಎಂದು ಗುಡುಗಿದರು.