newsics.com
ಬೆಂಗಳೂರು: ಚೆನ್ನೈ ಮೆಟ್ರೊ ರೈಲು ನಿಗಮ ನಿಯಮಿತ (ಸಿಎಂಆರ್ಎಲ್) ಪ್ರಸ್ತಾಪಿಸಿರುವ 6,900 ಕೋಟಿ ರೂ. ವೆಚ್ಚದ ಬೊಮ್ಮಸಂದ್ರ-ಹೊಸೂರು ಮೆಟ್ರೊ ಯೋಜನೆಗೆ ಕರ್ನಾಟಕದಿಂದ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
ಈ ಯೋಜನೆಯು ಕರ್ನಾಟಕದಲ್ಲಿ ಐದು ಮತ್ತು ತಮಿಳುನಾಡಿನಲ್ಲಿ ಏಳು ನಿಲ್ದಾಣಗಳನ್ನು ಹೊಂದಿರುತ್ತದೆ. ಒಟ್ಟು 23 ಕಿಮೀ ಎತ್ತರಿತ ಮೆಟ್ರೋ ಮಾರ್ಗದ (ಕರ್ನಾಟಕದಲ್ಲಿ 12 ಕಿಮೀ ಮತ್ತು ಟಿಎನ್ನಲ್ಲಿ 11 ಕಿಮೀ) ವಿಸ್ತೃತ ಯೋಜನಾ ವರದಿಯನ್ನು ಸಿಎಂಆರ್ಎಲ್ ತಂಡವು ಮಂಗಳವಾರ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ಸಿಎಲ್) ಅಧಿಕಾರಿಗಳಿಗೆ ಸಲ್ಲಿಸಿದೆ ಎಂದು ವರದಿಯಾಗಿದೆ.