newsics.com
ಕೋಲಾರ : ಈದ್ ಮಿಲಾದ್ ಮೆರವಣಿಗೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ ಉಂಟಾಗಿದೆ.
ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವಂತಹ ಘಟನೆ ನಗರದ ಕ್ಲಾಕ್ ಟವರ್ ಬಳಿ ನಡೆದಿದೆ.
ಸೈಯದ್ ಸಲ್ಮಾನ್, ಸೈಯದ್ ಸೈಫ್, ಹುಸೇನ್ ಕಾಷಿಪ್, ಖಲೀಲ್ ಅಹ್ಮದ್ ಮೇಲೆ ಸೈಯದ್ ವಸೀಂ ಪಾಷಾ, ತಾಹೀರ್ ಗುಂಪಿನಿಂದ ಹಲ್ಲೆ ಮಾಡಲಾಗಿದೆ. ನಾಲ್ವರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಸ್ಥಳಕ್ಕೆ ಕೋಲಾರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸದ್ಯ ಹಲ್ಲೆ ನಡೆಸಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.