newsics.com
ಲಕ್ನೋ: ಲಕ್ನೋದ ಟ್ರಾನ್ಸ್ಪೋರ್ಟ್ ನಗರ ಪ್ರದೇಶದಲ್ಲಿ 3 ಅಂತಸ್ತಿನ ಕಟ್ಟಡ ಕುಸಿದು ಐವರು ಸಾವಿಗೀಡಾಗಿದ್ದು, ಈವರೆಗೆ 24 ಜನರನ್ನು ರಕ್ಷಿಸಲಾಗಿದೆ. ಇನ್ನೂ ಹಲವರು ಸಿಲುಕಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರಿದಿದೆ.
ಅಧಿಕಾರಿಗಳ ಪ್ರಕಾರ, ಕಟ್ಟಡದ ನೆಲಮಾಳಿಗೆಯಲ್ಲಿ ಕಟ್ಟಡ ಕುಸಿತದ ವೇಳೆ ಕಾಮಗಾರಿ ನಡೆಯುತ್ತಿತ್ತು. ಘಟನೆಯಲ್ಲಿ ಸುಮಾರು 13 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹರ್ಮಿಲಾಪ್ ಬಿಲ್ಡಿಂಗ್ ಎಂದು ಕರೆಯಲ್ಪಡುವ ಕಟ್ಟಡವನ್ನು ಔಷಧ ವ್ಯಾಪಾರಕ್ಕಾಗಿ ಗೋಡೌನ್ ಆಗಿ ಬಳಸಲಾಗುತ್ತಿತ್ತು. ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
3 ಸಾವಿರ ಅಡಿ ಎತ್ತರದಲ್ಲಿರುವ ಈ ಪವರ್ಫುಲ್ ಗಣಪನ ಪೂಜೆಗೆ ಹೆಲಿಕಾಪ್ಟರ್ನಲ್ಲೇ ಬರ್ತಾರೆ ಅರ್ಚಕರು! ವಿಡಿಯೋ ನೋಡಿ