ನವದೆಹಲಿ: ಅಟಲ್ ಕನಸಿನ ಭೂಜಲ ಯೋಜನೆ ಇನ್ನು ಐದು ವರ್ಷಗಳಲ್ಲಿ ಕರ್ನಾಟಕ ಸೇರಿ ಏಳು ರಾಜ್ಯಗಳಲ್ಲಿ ಜಾರಿಗೊಳ್ಳಲಿದೆ.
ಕೇಂದ್ರ ಸಚಿವ ಸಂಪುಟ ಭೂ ಜಲ ಸಂಪನ್ಮೂಲಗಳ ನಿರ್ವಹಣೆ ಉದ್ದೇಶದ ಅಟಲ್ ಭೂಜಲ ಯೋಜನೆ ಪ್ರಸ್ತಾವನೆಗೆ ಮಂಗಳವಾರ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಹರಿಯಾಣ, ಉತ್ತರ ಪ್ರದೇಶಗಳ 8,350 ಗ್ರಾಮಗಳಲ್ಲಿ ಈ ಯೋಜನೆ ಜಾರಿಗೊಳ್ಳಲಿದೆ. ಇದಕ್ಕಾಗಿ ಕೇಂದ್ರ ಸರ್ಕಾರ 6,000 ಕೋಟಿ ರೂ. ಮೀಸಲಿರಿಸಿದೆ ಎಂದು ಜಾವಡೇಕರ್ ಮಾಹಿತಿ ನೀಡಿದ್ದಾರೆ.
ಇನ್ನೈದು ವರ್ಷದಲ್ಲಿ ಅಟಲ್ ಭೂಜಲ ಯೋಜನೆ ಜಾರಿ
Follow Us