newsics.com
ನವದೆಹಲಿ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ವಿದೇಶಕ್ಕೆ ತೆರಳಲು ಇಡಿ ಅನುಮತಿ ನೀಡಿದೆ.
ಸುಖೇಶ್ ಚಂದ್ರಶೇಖರ್ ವಿರುಧ್ದದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು ಅವರನ್ನು ವಿಚಾರಣೆಗೆ ಒಳಪಡಿಸಿತ್ತು.
ಸುಖೇಶ್ ಚಂದ್ರಶೇಖರ್ ಅವರೊಂದಿಗೆ ಜಾಕ್ವೆಲಿನ್ ಅವರಿಗೆ ಸ್ನೇಹವಿದ್ದು ಹಲವು ಬಾರಿ ಆಕೆಯನ್ನು ತನಿಖೆಗೆ ಒಳಪಡಿಸಲಾಗಿದೆ. 200 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣದಲ್ಲಿ ಸುರೇಶ್ ಚಂದ್ರಶೇಖರ್ ಇಡಿ ಅವರು ವಿಚಾರಣೆ ನಡೆಸುತ್ತಿದ್ದಾರೆ.