ನವದೆಹಲಿ: ಚಿತ್ರರಂಗದ ಅತ್ಯುನ್ನತ ಪ್ರಶಸ್ತಿ ಯಾಗಿರುವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಭಾಜನರಾಗಿರುವ ಅಮಿತಾಬ್ ಬಚ್ಚನ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಹಾಜರಾಗಲಿಲ್ಲ.
ತಮ್ಮ ವೃತ್ತಿಜೀವನದ ಅತ್ಯುತ್ತಮ ಸಾಧನೆಯನ್ನು ಗುರುತಿಸಿ ನೀಡುತ್ತಿರುವ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗದಿರುವುದಿಕ್ಕೆ ಬಿಗ್ ಬಿ ಬೇಸರ ವ್ಯಕ್ತಪಡಿಸಿದ್ದಾರೆ.
“ತೀವ್ರ ಜ್ವರದ ಕಾರಣದಿಂದ ದೆಹಲಿಗೆ ಪ್ರಯಾಣ ಮಾಡಲು ಆಗುತ್ತಿಲ್ಲ ಪರಿಣಾಮ ರಾಷ್ಟ್ರೀಯ ಪ್ರಶಸ್ತಿಗೆ ಹಾಜರಾಗಲು ಸಾಧ್ಯವಾಗದಿರುವುದು ನಿಜಕ್ಕೂ ದುರದೃಷ್ಟಕರ, ವಿಷಾದನೀಯ” ಎಂದು ಅವರು ಟ್ವೀಟ್ ಮಾಡಿದ್ದಾರೆ.