ಗೋವಾ; ದೇಶದ ರಕ್ಷಣಾ ಸಚಿವರಾಗಿ ಕೂಡ ಕಾರ್ಯನಿರ್ವಹಿಸಿದ್ದ ಗೋವಾ ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರಿಕ್ಕರ್ ಅವರ ಜೀವನಾಧಾರಿತ ಚಿತ್ರ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ.
ಗೋ ಗೋವಾ ಗಾಲಿವುಡ್ ಎಂಬ ನಿರ್ಮಾಣ ಸಂಸ್ಥೆ ಈ ಸಂಬಂಧ ಪರಿಕ್ಕರ್ ಅವರ ಪುತ್ರ ಉತ್ಪಾಲ್ ಪರಿಕ್ಕರ್ ಅವರಿಂದ ಚಿತ್ರ ನಿರ್ಮಾಣಕ್ಕೆ ಹಕ್ಕು ಪಡೆದುಕೊಂಡಿದ್ದಾರೆ. ಮುಂದಿನ ವರ್ಷದ ಡಿ.13ರಂದು ಅವರ ಜನ್ಮದಿನಾಚರಣೆಯ ಅಂಗವಾಗಿ ಚಿತ್ರ ಬಿಡುಗಡೆಗೊಳ್ಳಲಿದೆ.
ಚಿತ್ರ ಹಿಂದಿ ಮತ್ತು ಕೊಂಕಣಿ ಭಾಷೆಯಲ್ಲಿ ತೆರೆಯ ಮೇಲೆ ಬರಲಿದೆ.