newsics.com
ಹೈದರಾಬಾದ್: ನನ್ನ ಇಬ್ಬರೂ ಹೆಣ್ಣು ಮಕ್ಕಳು ನಿತ್ಯಾನಂದನ ಜೊತೆ ವಾಸಿಸುತ್ತಿದ್ದಾರೆ ಎಂದು ನಟ ಅಶೋಕ್ ಕುಮಾರ್ ಭಾವುಕರಾಗಿದ್ದಾರೆ.
ನಮಗೆ ಮೂರು ಜನ ಹೆಣ್ಣು ಮಕ್ಕಳು, ಅವರು ಇಷ್ಟಪಟ್ಟರ ಜೊತೆ ಮದುವೆ ಮಾಡಿಸಿಕೊಟ್ಟೆ, ನನ್ನ ಮೊದಲನೇ ಮಗಳು ಅಮೆರಿಕಾದಲ್ಲಿ ಇದ್ದಾಳೆ. ಅವಳು ಆಗಾಗ ನಿತ್ಯಾನಂದ ಸ್ವಾಮಿ ಆಶ್ರಮಕ್ಕೆ ಪ್ರವಚನ ಕೇಳಲು ಹೋಗುತ್ತಿದ್ದಳು. ಅಕ್ಕನನ್ನು ನೋಡಲು ನನ್ನ 2ನೇ ಮಗಳು ರಂಜಿತಾ ಹೋಗಲು ಆರಂಭಿಸಿದ್ದಳು.
ನಿತ್ಯಾನಂದ ಸ್ವಾಮಿ ಜೊತೆ ನನ್ನ ಮಗಳು ರಂಜಿತಾ ಇದ್ದಾಳೆ ಅಂತಾ ಜನ ಹೇಳ್ತಾರೆ. ರಂಜಿತಾ- ನಿತ್ಯಾನಂದು ನಡುವಿನ ರಿಲೇಷನ್‌ಶಿಪ್ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ಆ ಫೋಟೋಗಳನ್ನ ನೋಡಿದರೆ ಏನೋ ಹೇಳಬೇಕೋ ಗೊತ್ತಾಗುತ್ತಿಲ್ಲ. ನನ್ನ ಇಬ್ಬರು ಮಕ್ಕಳು ಗಂಡಂದಿರಿಗೆ ಡಿವೋರ್ಸ್ ನೀಡಿ, ನಿತ್ಯಾನಂದ ಸ್ವಾಮಿ ಆಶ್ರಮ ಸೇರಿದ್ದಾರೆ. ಇವತ್ತಿಗೂ ಅವರು ಅಲ್ಲೇ ಇದ್ದಾರೆ ಎಂದು ನಟ ಅಶೋಕ್ ಕುಮಾರ್ ಕಣ್ಣೀರಿಟ್ಟಿದ್ದಾರೆ. ಇಂದಿಗೂ ನನ್ನ ಇಬ್ಬರೂ ಮಕ್ಕಳು ಕರೆ ಮಾಡಲಿಲ್ಲ. ನಮ್ಮ 3ನೇ ಮಗಳು ನನ್ನನ್ನೂ ನೋಡಿಕೊಳ್ತಿದ್ದಾರೆ.