ವಾಷಿಂಗ್ಟನ್:ನಟಿ ಪ್ರಿಯಾಂಕಾ ಚೋಪ್ರಾ ಅಮ್ಮ ಆಗಿದ್ದಾರೆ. ಸಾಮಾಜಿಕ ಜಾಲ ತಾಣದ ಮೂಲಕ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನ್ಸ್ ಈ ಮಾಹಿತಿ ಹಂಚಿಕೊಂಡಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ಮಗುವಿಗೆ ಜನ್ಮ ನೀಡಿದ್ದಾರೆ
ಈ ಶುಭ ಸುದ್ದಿ ಹಂಚಿಕೊಳ್ಳುತ್ತಿದ್ದೇನೆ. ಇದರ ಜತೆ ಜತೆಗೆ ನಮ್ಮ ಖಾಸಗೀತನವನ್ನು ಗೌರವಿಸಿ ಎಂದು ಅವರು ಮನವಿ ಮಾಡಿದ್ದಾರೆ.
2018ರಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನ್ಸ್ ಮದುವೆ ನೆರವೇರಿತ್ತು. ಜೈಪುರದಲ್ಲಿ ಈ ಅದ್ದೂರಿ ಮದುವೆ ಆಯೋಜಿಸಲಾಗಿತ್ತು.
ಇತ್ತೀಚೆಗೆ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ವದಂತಿ ಕೂಡ ಹಬ್ಬಿತ್ತು