newsics.com
ಹೈದರಾಬಾದ್: ನಟಿ ರಾಶಿ ಖನ್ನಾ ಅವರ ನೂತನ ಚಿತ್ರ ಪಕ್ಕಾ ಕಮರ್ಷಿಯಲ್ ಬಿಡುಗಡೆಯಾಗಿದೆ. ಮೊದಲ ದಿನ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ವರದಿಯಾಗಿದೆ.
ಗೋಪಿ ಚಂದ್ ಈ ಚಿತ್ರದ ನಾಯಕ. ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ಮಿಂಚುತ್ತಿರುವ ರಾಶಿ ಖನ್ನಾ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆ ಇರಿಸಿದ್ದಾರೆ.
ಚಿತ್ರ ಬಿಡುಗಡೆ ಮುನ್ನ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ರಾಶಿ ಖನ್ನಾ ವಿಶೇಷ ಪೂಜೆ ಸಲ್ಲಿಸಿದ್ದರು.