newsics.com
ಬೆಂಗಳೂರು: ನಟಿ ರಮ್ಯಾ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ರಾಜಕೀಯದಿಂದ ಬಿಡುವು ಪಡೆದುಕೊಂಡಿದ್ದ ರಮ್ಯಾ ಇದೀಗ ಸಿನಿಮಾ ಮತ್ತು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ.
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಕೂಡ ರಮ್ಯಾ ಹೆಜ್ಜೆ ಹಾಕಿದ್ದರು.
ಹೊಂಬಾಳೆ ಸಂಸ್ಥೆ ನಿರ್ಮಿಸುತ್ತಿರುವ ಚಿತ್ರದಲ್ಲಿ ಅಭಿನಯಿಸುವುದಾಗಿ ರಮ್ಯಾ ಘೋಷಿಸಿದ್ದಾರೆ.
ಹುಟ್ಟು ಹಬ್ಬಕ್ಕೆ ಶುಭ ಕೋರಿದ ಅಭಿಮಾನಿಗಳಿಗೆ ರಮ್ಯಾ ಧನ್ಯವಾದ ಅರ್ಪಿಸಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ಫೋಟೋ ಶೇರ್ ಮಾಡಿದ್ದಾರೆ.