Tuesday, April 13, 2021

ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಸೀನಿಯರ್ ಬಚ್ಚನ್

ಮುಂಬೈ: ಖ್ಯಾತ ಚಿತ್ರ ನಟ ಅಮಿತಾಭ್ ಬಚ್ಚನ್ ಅವರು ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ತಮ್ಮ ಮದುವೆ ಕುರಿತ ಕೆಲವು ವಿಷಯಗಳನ್ನು ಅವರು ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ. ಟ್ವಿಟರ್ ನಲ್ಲಿ ಮದುವೆಯ ಫೋಟೊವನ್ನು ಕೂಡ ಶೇರ್ ಮಾಡಿದ್ದಾರೆ. ಜಂಜೀರ್ ಚಿತ್ರದ ಯಶಸ್ಸಿನಲ್ಲಿದ್ದೆ. ಸ್ನೇಹಿತರೆಲ್ಲ ಲಂಡನ್ ಗೆ ತೆರಳಿ ಪಾರ್ಟಿ ಮಾಡಲು ಪ್ಲಾನ್ ಮಾಡಿದ್ದರು. ನಾನು ಕೂಡ ಅದಕ್ಕೆ ಸಮ್ಮತಿಸಿದ್ದೆ. ಇದು 1973 ರಲ್ಲಿ ನಡೆದ ಘಟನೆ. ಆದರೆ ತಂದೆ ಒಂದು ಶರತ್ತು ವಿಧಿಸಿದ್ದರು. ಮೊದಲು ಮದುವೆಯಾಗು. ಆ ಬಳಿಕ ಲಂಡನ್ ಪ್ರಯಾಣ. ಮದುವೆ ಇಲ್ಲ ಎಂದರೆ  ಲಂಡನ್ ಪ್ರವಾಸ ಕೂಡ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ತಂದೆಯ ಮಾತಿಗೆ ಯೆಸ್ ಎಂದೆ. 1973 ಜೂನ್ ಮೂರರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದೆ ಎಂದು ಸೀನಿಯರ್ ಬಚ್ಚನ್ ತಮ್ಮ ಮದುವೆ ಬಗ್ಗೆ  ಮಾಹಿತಿ ಹಂಚಿಕೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!