newsics.com
ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟ ಅರ್ಮಾನ್ ಕೊಹ್ಲಿಯ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.
ಅರ್ಮಾನ್ ಸೇರಿದಂತೆ ಇತರ ಇಬ್ಬರ ಜಾಮೀನು ಅರ್ಜಿಯನ್ನು ವಿಶೇಷ ಎನ್ ಡಿಪಿಎಸ್ ನ್ಯಾಯಾಲಯ ತಿರಸ್ಕರಿಸಿದೆ. ಅರ್ಮಾನ್ ಸದ್ಯ ಆರ್ಥರ್ ರೋಡ್ ಜೈಲಿನಲ್ಲಿ ಇದ್ದಾನೆ.
ನಟ, ಮಾಜಿ ಬಿಗ್ ಬಾಸ್ ಸ್ಪರ್ಧಿ ಅರ್ಮಾನ್ ಕೊಹ್ಲಿಯ ಮುಂಬೈ ನಿವಾಸಕ್ಕೆ ದಾಳಿ ನಡೆಸಿದ್ದ ಎನ್ ಸಿಬಿ ಕೊಕೇನ್ ವಶಪಡಿಸಿಕೊಂಡಿತ್ತು.