Wednesday, October 28, 2020

ಚಿರಂಜೀವಿ ಸರ್ಜಾ ನಟನೆಯ ಕ್ಷತ್ರಿಯ ಚಿತ್ರದ ಟೀಸರ್ ರಿಲೀಸ್

ಬೆಂಗಳೂರು: ದಿವಂಗತ ನಟ ಚಿರಂಜೀವಿ ಸರ್ಜಾ ಅವರ ಕೊನೆಯ ಅಭಿನಯದ ಕ್ಷತ್ರಿಯ ಚಿತ್ರದ ಟೀಸರ್ ಅನ್ನು ಯುಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ.ಚಿರು ಜನ್ಮದಿನದ ಅಂಗವಾಗಿ ಇಂದು (ಅ.17) ಚಿತ್ರ ತಂಡ ಟೀಸರ್ ಅನ್ನು ಬಿಡುಗಡೆ ಮಾಡಿದೆ.ಚಿತ್ರದಲ್ಲಿ ಚಿರಂಜೀವಿ ಅವರೊಂದಿಗೆ ನಾಯಕಿಯಾಗಿ ಸಂಜನಾ ಆನಂದ್ ಕಾಣಿಸಿಕೊಂಡಿದ್ದಾರೆ.

ಎ.ವೆಂಕಟೇಶ್ ‘ಕ್ಷತ್ರಿಯ’ ಸಿನಿಮಾವನ್ನು ನಿರ್ಮಿಸಿದ್ದು, ಅನಿಲ್ ಮಂಡ್ಯ ನಿರ್ದೇಶಿಸಿದ್ದಾರೆ. ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಕೊನೆಯ ಕೆಲವು ಭಾಗವಷ್ಟೇ ಬಾಕಿ ಉಳಿದಿದೆ ಎಂದು ಚಿತ್ರ ತಂಡ ಹೇಳಿದೆ.
ಸಿನಿಮಾದ ಡಬ್ಬಿಂಗ್ ಪ್ರಾರಂಭವಾಗುವ ವೇಳೆಗೆ ಚಿರು ಸರ್ಜಾ ನಿಧನದ ಕಾರಣ ಧೃವ ಸರ್ಜಾ  ಧ್ವನಿ ನೀಡಿ ಡಬ್ಬಿಂಗ್ ಮಾಡಿದ್ದಾರೆ.
ಯುಟ್ಯೂಬ್ ನಲ್ಲಿ ಟೀಸರ್ ಬಿಡುಗಡೆಯಾಗಿ 4 ಗಂಟೆಯಲ್ಲಿ 80 ಸಾವಿರಕ್ಕೂ ಅಧಿಕ ಜನ ವೀಕ್ಷಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಪ್ರೊಫೆಸರ್ ಹತ್ಯೆ ಪ್ರಕರಣ: ಖ್ಯಾತ ಗಾಯಕಿ ಅನನ್ಯ ಭಟ್ ತಂದೆ ಬಂಧನ

newsics.com ಮೈಸೂರು: ಸಾಂಸ್ಕೃತಿಕ ನಗರ ಮೈಸೂರನ್ನು ಬೆಚ್ಚಿ ಬೀಳಿಸಿದ್ದ ಪ್ರೊಫೆಸರ್ ಪರಶಿವಮೂರ್ತಿ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಹತ್ಯೆಗೆ ಸುಫಾರಿ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಖ್ಯಾತ ಗಾಯಕಿ ಅನನ್ಯ...

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 65 ಸಾಧಕರಿಗೆ ಪ್ರಶಸ್ತಿ ಗೌರವ

Newsics.com ಬೆಂಗಳೂರು: ರಾಜ್ಯದ ಪ್ರತಿಷ್ಠಿತ  2020ರ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಂಘ ಸಂಸ್ಥೆಗಳು, ಸಾಧಕರು ಸೇರಿದಂತೆ 65 ಮಂದಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.  ಬೆಂಗಳೂರಿನಲ್ಲಿ  ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ ಟಿ ರವಿ ...

ಎನ್‌ಐಎನಿಂದ ಬೆಂಗಳೂರಲ್ಲಿ ಇನ್ನಿಬ್ಬರು ಶಂಕಿತ ಉಗ್ರರ ಬಂಧನ

newsics.comಬೆಂಗಳೂರು: ನಗರದಲ್ಲಿ ಶಂಕಿತ ಐಸಿಸ್ ಉಗ್ರರ ಭೇಟೆ ಮುಂದುವರಿಸಿರುವ ಎನ್‌ಐಎ ಅಧಿಕಾರಿಗಳ ತಂಡ, ಇದೀಗ ಇನ್ನಿಬ್ಬರು ಶಂಕಿತರನ್ನು ಬಂಧಿಸಿದೆ.ಬೆಂಗಳೂರಿನ ಥಣಿಸಂದ್ರದಲ್ಲಿರುವ ನಿವಾಸವೊಂದರ ಮೇಲೆ ದಾಳಿ ನಡೆಸಿರುವ ದೆಹಲಿ ಎನ್‌ಐಎ ಟೀಮ್,...
- Advertisement -
- Advertisement -
error: Content is protected !!