newsics.com
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳ ನಿರ್ಮಾಣದ ಕಿರು ಚಿತ್ರಕ್ಕೆ ರಾಷ್ಟ್ರ ಮಟ್ಟದ ಕಿರು ಚಿತ್ರ ಸ್ಪರ್ಧೆಯಲ್ಲಿ ಉತ್ತಮ ಛಾಯಾಗ್ರಹಣ ಪ್ರಶಸ್ತಿ ದೊರಕಿದೆ.
ಪದವಿ ಮತ್ತು ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ನಿರ್ಮಿಸಿದ ‘ಮೌನ’ ಕಿರುಚಿತ್ರ ಉತ್ತಮ ಛಾಯಾಗ್ರಹಣ ಪ್ರಶಸ್ತಿ ಪಡೆದುಕೊಂಡಿದೆ.
ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆ ಆಯೋಜಿಸಿದ್ದ ರಾಷ್ಟ್ರ ಮಟ್ಟದ’ಆಳ್ವಾಸ್ ಅರೇನಾ’ ಕಿರುಚಿತ್ರ ಸ್ಪರ್ಧೆಯಲ್ಲಿ ಮೌನ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.
ಅಚಲ್ ಉಬರಡ್ಕ ನಿರ್ದೇಶಿಸಿದ್ದು, ಮುಖ್ಯ ಭೂಮಿಕೆಯಲ್ಲಿ ಜಗದೀಶ್ ಜೆ ಹಾಗೂ ಪೃಥ್ವಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಕಥೆಯನ್ನು ವಿದ್ಯಾರ್ಥಿಗಳೇ ಹೆಣೆದು, ನಟಿಸಿ, ನಿರ್ದೇಶಿಸಿದ್ದು ವಿಶೇಷವಾಗಿದೆ.