newsics.com
ಸ್ಯಾಂಡಲ್ವುಡ್ನ ಹಾಸ್ಯ ನಟ ಚಿಕ್ಕಣ್ಣ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂಬ ವದಂತಿಗಳಿಗೆ ಹಾಸ್ಯ ನಟ ಚಿಕ್ಕಣ್ಣ ಸ್ಪಷ್ಟನೆ ನೀಡಿದ್ದಾರೆ. ಯಾರೋ ಕಿಡಿಗೇಡಿಗಳು ಈ ರೀತಿ ಸುದ್ದಿ ಮಾಡುತ್ತಿದ್ದು ನಾನು ಆರೋಗ್ಯವಾಗಿಯೇ ಇದ್ದೇನೆ ಎಂದು ಹೇಳಿದ್ದಾರೆ.
ಉಪಾಧ್ಯಕ್ಷ ಸಿನಿಮಾ ಮೂಲಕ ಮೊದಲ ಬಾರಿಗೆ ಸಿನಿಮಾದ ನಾಯಕನಾಗಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ನಟ ಚಿಕ್ಕಣ್ಣ ಇದೇ ಸಿನಿಮಾದ ಶೂಟಿಂಗ್ ಸೆಟ್ನಿಂದ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ನನ್ನ ಆರೋಗ್ಯದ ಬಗ್ಗೆ ಹರಡುತ್ತಿರುವ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.