newsics.com
ಬೆಂಗಳೂರು: ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ನಿಶ್ಚಿತಾರ್ಥದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಡಿಸೆಂಬರ್ 2 ರಂದು ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಹರಿಪ್ರಿಯಾ ನಿವಾಸದಲ್ಲಿಯೇ ನಿಶ್ಚಿತಾರ್ಥ ಸಮಾರಂಭ ನಡೆದಿದೆ. ಸಿಂಪಲ್ ಆಗಿ ನಡೆದ ನಿಶ್ಚಿತಾರ್ಥದ ಸಂಭ್ರಮದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಇಬ್ಬರೂ ಉಂಗುರ ಬದಲಾಯಿಸಿಕೊಂಡಿದ್ದಾರೆ. ಈ ಸಮಾರಂಭದಲ್ಲಿ ವಸಿಷ್ಠ ಮತ್ತು ಹರಿಪ್ರಿಯಾ ಕುಟುಂಬದವರು ಮಾತ್ರ ಹಾಜರಿದ್ದರು.
ಹರಿಪ್ರಿಯಾ ಹಳದಿ ಬಣ್ಣದ ಜೆರೆ ಸೀರಿಯಲ್ಲಿ ಕಂಗೊಳಿಸಿದ್ದರು. ವಸಿಷ್ಠ ಕೂಡ ಹಳದಿ ಬಣ್ಣದ ಮಾಡ್ರನ್ ದೋತಿ ಧರಿಸಿದ್ದರು.ಆದರೆ ಈ ಬಗ್ಗೆ ಹರಿಪ್ರಿಯಾ ಅಥವಾ ವಸಿಷ್ಠ ಕಡೆಯಿಂದ ಯಾವುದೇ ಮಾಹಿತಿ ರಿವೀಲ್ ಆಗಿರಲಿಲ್ಲ. ಇದೀಗ ಇಬ್ಬರ ನಿಶ್ಚಿತಾರ್ಥದ ಫೋಟೋಗಳು ರಿವೀಲ್ ಆಗಿದೆ.