ಮುಂಬೈ: ಅನಾರೋಗ್ಯದಿಂದ ಬಳಲುತ್ತಿರುವ ನಟಿ ಇಲಿಯಾನಾ ಡಿಕ್ರೂಸ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆ ಬೆಡ್ನಲ್ಲಿ ಮಲಗಿರುವ ಇಲಿಯಾನಾ ಡಿಕ್ರೂಸ್ ಅವರು ತಮ್ಮ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಅವುಗಳನ್ನು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ಹೆಲ್ತ್ ಬಗ್ಗೆ ಅಪ್ಡೇಟ್ ನೀಡಿದ್ದಾರೆ. ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಇಲಿಯಾನಾ ಡಿಕ್ರೂಸ್ ಅವರಿಗೆ ಡ್ರಿಪ್ಸ್ ಹಾಕಲಾಗಿದೆ. ಈಗ ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಈ ಸುದ್ದಿ ತಿಳಿದು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ