newsics.com
ಬೆಂಗಳೂರು: ಜೋಶ್ ಸಿನಿಮಾ ಸ್ಯಾಂಡಲ್‌ವುಡ್‌ನಲ್ಲಿ ಮೋಡಿ ಮಾಡಿದ್ದ ನಟಿ ಪೂರ್ಣ ಅಲಿಯಾಸ್ ಶಮ್ನಾ ಕಾಸಿಮ್ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಸದ್ಯ ನಟಿ ಪೂರ್ಣ ಬೇಬಿ ಶವರ್ ಕಾರ್ಯಕ್ರಮದ ಸಂಭ್ರಮದಲ್ಲಿದ್ದಾರೆ. ಕೆಂಪು ಬಣ್ಣದ ಸೀರೆಯಲ್ಲಿ ನಟಿ ಮಿರ ಮಿರ ಅಂತಾ ಮಿಂಚಿದ್ದಾರೆ. ಈ ಕುರಿತ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಪೂರ್ಣ ಕಳೆದ 2022ರ ಅಕ್ಟೋಬರ್ 25ರಂದು ಶನಿದ್ ಅಸಿಫ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದುಬೈ ಮೂಲದ ಉದ್ಯಮಿ ಶನಿದ್ ಜೊತೆ ಅದ್ದೂರಿಯಾಗಿ ವಿವಾಹವಾಗಿದ್ದರು.