Tuesday, October 4, 2022

ಹಿರಿಯ ಹಾಸ್ಯ ನಟ ಉಮೇಶ್ ಸಿನಿ ಪಯಣಕ್ಕೆ 62ನೇ ಸಂಭ್ರಮ

Follow Us

newsics.com

ಬೆಂಗಳೂರು: ಕನ್ನಡದ ಹಿರಿಯ ಹಾಸ್ಯ ನಟ ಉಮೇಶ್ ಸಿನಿ ಪಯಣಕ್ಕೆ 62ನೇ ಸಂಭ್ರಮ. ಉಮೇಶ್ ಚಿತ್ರರಂಗದಲ್ಲಿ 62 ವರ್ಷ ಪೂರೈಸಿರುವ ಹಿನ್ನೆಲೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಭಿನಂದನ ಸಲ್ಲಿಸಿದೆ.

ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ.ಹರೀಶ್ ನೇತೃತ್ವದಲ್ಲಿ ಉಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಚಿತ್ರರಂಗದ ಮತ್ತೊಬ್ಬ ಹಿರಿಯ ಕಲಾವಿದರಾದ  ಬೆಂಗಳೂರು ನಾಗೇಶ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 60 ವರ್ಷ ಪೂರೈಸಿದ ಹಿನ್ನೆಲೆ ಅವರನ್ನು ಕೂಡ ಸನ್ಮಾನಿಸಲಾಯಿತು.

ನಾಟಕಗಳಲ್ಲಿ ಬಾಲ ಕಲಾವಿದರಾಗಿ ಅಭಿನಯಿಸುತ್ತಿದ್ದ ಉಮೇಶ್ ಚಲನಚಿತ್ರ ರಂಗಕ್ಕೆ ಮಕ್ಕಳ ರಾಜ್ಯ ಚಿತ್ರದ ಮೂಲಕ ಅಡಿಯಿಟ್ಟರು. ಕನ್ನಡದ ಸುಮಾರು 250ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ವಿವಿಧ ಬಗೆಯ ಪಾತ್ರಗಳನ್ನು ಪೋಷಿಸಿರುವ ಉಮೇಶ್ ಹಾಸ್ಯ ನಟರಾಗಿ ಹೆಸರುವಾಸಿ.

ಕಥಾಸಂಗಮದ ‘ಮುನಿತಾಯಿ’ಯಲ್ಲಿ ತಿಮ್ಮರಾಯಿ ಪಾತ್ರ ಅವರ ಕಲಾ ಪ್ರೌಢಿಮೆಯನ್ನು ಬೆಳಕಿಗೆ ತಂದಿತ್ತು. ಈ ಪಾತ್ರಕ್ಕೆ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಗೆ ಮುತ್ತಿಟ್ಟರು.

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಿಂದ ಪಿ ವಿ ಸಿಂಧು ಔಟ್

ಮತ್ತಷ್ಟು ಸುದ್ದಿಗಳು

vertical

Latest News

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ...

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...
- Advertisement -
error: Content is protected !!