newsics.com
ಬೆಂಗಳೂರು: ನ್ಯೂಯಾರ್ಕ್ನ ಪ್ರತಿಷ್ಟಿತ ಇಂಡಿಪೆಂಡೆಂಟ್ ಫಿಲ್ಮ್ ಫೆಸ್ಟಿವಲ್ಗೆ ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಡಿ. ಸತ್ಯಪ್ರಕಾಶ್ ನಿರ್ದೇಶನದ ಕನ್ನಡ ಚಲನಚಿತ್ರ ‘ಮ್ಯಾನ್ ಆಫ್ ದಿ ಮ್ಯಾಚ್’ ಆಯ್ಕೆಯಾಗಿದೆ. ಆಗಸ್ಟ್ 5 ರಿಂದ 14ರವರೆಗೆ ಈ ಚಲನಚಿತ್ರೋತ್ಸವ ನಡೆಯಲಿದೆ.
ಮೇ 5ರಂದು ಅಮೆಜಾನ್ ಪ್ರೈಮ್ನಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಸತ್ಯ ಮತ್ತು ಮಯೂರ ಪಿಕ್ಚರ್ಸ್ ಸಹಯೋಗದೊಂದಿಗೆ ಪುನೀತ್ ರಾಜಕುಮಾರ್ ಅವರ PRK ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿತ್ತು.
ಚಲನಚಿತ್ರವನ್ನು ವೀಕ್ಷಿಸಿದ ಚಿತ್ರ ವಿಮರ್ಶಕ, ಲಾರೆನ್ಸ್ ವೈಟ್ನರ್, ನಿರ್ದೇಶಕರನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.
ವಾಸುಕಿ ವೈಭವ್ ಚಿತ್ರಕ್ಕೆ ಸಂಗೀತ ನೀಡುವುದರ ಜತೆಗೆ ಚಿತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಧರ್ಮಣ್ಣ ಕಡೂರ್, ನಟರಾಜ್ ಎಸ್.ಭಟ್, ಅಥರ್ವ ಪ್ರಕಾಶ್, ಮಯೂರಿ ನಟರಾಜ್, ವೀಣಾ ಮತ್ತು ಸುಂದರ್ ಮೊದಲಾದವರು ಅಭಿನಯಿಸಿದ್ದಾರೆ.
ಎನ್ ಸಿಪಿ ಅಧ್ಯಕ್ಷ ಪವಾರ್ ಕುರಿತು ಅವಹೇಳನಕಾರಿ ಪೋಸ್ಟ್ : ಮರಾಠಿ ನಟಿ ಚಿತಳೆ ಬಂಧನ
ಉಡುಪಿಯ ಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ