newsics.com
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಅವರನ್ನು ದಾಖಲಿಸಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 89 ವರ್ಷದ ಭಗವಾನ್ ಅವರು ಇತ್ತೀಚೆಗೆ ಶೀತದಿಂದ ಬಳಲುತ್ತಿದ್ದು, ಉಸಿರಾಟದ ಸಮಸ್ಯೆಯಿಂದ 2 ದಿನದ ಹಿಂದೆಯೇ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಡಾ.ಮಂಜುನಾಥ್ ಅವರು ಭಗವಾನ್ಗೆ ಚಿಕಿತ್ಸೆ ನೀಡುತ್ತಿದ್ದಾರೆ.
ನಟ, ನಿರ್ದೇಶಕ, ನಿರ್ಮಾಪಕನಾಗಿ ಕನ್ನಡ ಚಿತ್ರರಂಗದಲ್ಲಿ ಭಗವಾನ್ ಗುರುತಿಸಿಕೊಂಡಿದ್ದರು.