newsics.com
ಮುಂಬೈ: ಇತ್ತೀಚೆಗಷ್ಟೇ ಬಾಲಿವುಡ್ ನಟಿ ಕರೀನಾ ಕಪೂರ್ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತಾಗಿ ‘ಪ್ರೆಗ್ನೆನ್ಸಿ ಬೈಬಲ್’ ಎಂಬ ಪುಸ್ತಕವನ್ನೂ ಬರೆದಿದ್ದು, ಅದರ ಪ್ರಮೋಷನ್ ಸಂದರ್ಶನವೊಂದರಲ್ಲಿ ಗರ್ಭಿಣಿಯಾಗಿದ್ದಾಗ ಸೆಕ್ಸ್ ಮೇಲಿನ ಆಸಕ್ತಿಯನ್ನು ಕಳೆದುಕೊಂಡಿರುವುದಾಗಿ ಹೇಳಿದ್ದಾರೆ.
ಮಹಿಳೆ ಗರ್ಭವತಿಯಾದಾಗ ಆಕೆಯ ತಳಮಳ, ಭಾವನೆಗಳು, ಮಾನಸಿಕ ಉದ್ವೇಗ, ಮೂಡ್ ಕ್ಷಣದಿಂದ ಕ್ಷಣಕ್ಕೆ ಬದಲಾಗುತ್ತಲೇ ಇರುತ್ತವೆ. ಆಗ ಆಕೆಯೊಂದಿಗೆ ಇರುವ ಪತಿ ಇದನ್ನು ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಈ ವಿಷಯದಲ್ಲಿ ಸೈಫ್ ಅವರನ್ನು ಮೆಚ್ಚಿಕೊಳ್ಳಬೇಕು. ಚೆನ್ನಾಗಿ ಹೊಂದಿಕೊಂಡಿದ್ದರು ಎಂದು ಪತಿಯನ್ನು ಹೊಗಳಿದ್ದಾರೆ.
ದಂಪತಿಯ ನಡುವೆ ಲೈಂಗಿಕ ಕ್ರಿಯೆ ಬಾಂಧವ್ಯವನ್ನು ಬೆಸೆಯುತ್ತದೆ. ಆದರೆ ಇಬ್ಬರಲ್ಲಿ ಒಬ್ಬರಿಗೆ ಆ ಕ್ಷಣದಲ್ಲಿ ಸೆಕ್ಸ್ ಮಾಡಲು ಆಸಕ್ತಿ ಇಲ್ಲದೇ ಹೋದಲ್ಲಿ ಮತ್ತೊಬ್ಬರು ಅದನ್ನು ಅರ್ಥ ಮಾಡಿಕೊಳ್ಳಬೇಕು. ಆಗ ಮಾತ್ರ ದಾಂಪತ್ಯ ಅರ್ಥ ಪೂರ್ಣ ಎಂದು ಕರೀನಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕರೀನಾ ದಂಪತಿ ತಮ್ಮ ಎರಡನೇ ಮಗುವಿಗೆ ಜಹಾಂಗೀರ್ ಎಂದು ನಾಮಕರಣ ಮಾಡಿದ್ದಾರೆ.