Saturday, January 23, 2021

ಕೆಜಿಎಫ್-2 ಟೀಸರ್: ಯಶ್ ಗೆ ಆರೋಗ್ಯ ಇಲಾಖೆ ನೋಟಿಸ್

Newsics.com

ಬೆಂಗಳೂರು: ಸಾಮಾಜಿಕ ಜಾಲ ತಾಣಗಳಲ್ಲಿ ದಾಖಲೆ ಬರೆದಿರುವ ಕೆಜಿಎಫ್- 2 ಟೀಸರ್ ಕುರಿತು ಆರೋಗ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. ಟೀಸರ್ ನಲ್ಲಿ ಧೂಮಪಾನ ಪ್ರಚೋದಿಸುವ ದೃಶ್ಯ ಇದೆ. ಇದು ಸಮಾಜದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಟೀಸರ್ ನಲ್ಲಿ ಧೂಮಪಾನ ಚಿತ್ರ ತೆರವುಗೊಳಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಈ ಸಂಬಂಧ ನಟ ಯಶ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಯಶ್ ಅವರು ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ದೃಶ್ಯ ಅವರ ಮೇಲೆ ಕೂಡ ಕೆಟ್ಟ ಪರಿಣಾಮ ಬೀರಲಿದೆ ಎಂದು ಆರೋಗ್ಯ ಇಲಾಖೆ ತನ್ನ ನೋಟಿಸ್ ನಲ್ಲಿ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ತುಪ್ಪದ ಬೆಡಗಿ ರಾಗಿಣಿ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆ

Newsics.com ಬೆಂಗಳೂರು: ಮಾದಕ ದ್ರವ್ಯ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಇಂದು ಪರಪ್ಪನ ಅಗ್ರಹಾರ ಜೈಲ್ಲಿನಿಂದ ಬಿಡುಗಡೆಯಾಗಲಿದ್ದಾರೆ. ಸುಪ್ರೀಂಕೋರ್ಟ್ ಆದೇಶದ ಪ್ರತಿ ಅವರ ವಕೀಲರ ಕೈ ಸೇರಿದ್ದು,...

ಕೊರೋನಾ ಮಾರ್ಗ ಸೂಚಿ ಉಲ್ಲಂಘನೆ: ವಾಟಾಳ್ ವಿರುದ್ದ ಎಫ್ ಐ ಆರ್

Newsics.com ಬೆಂಗಳೂರು: ನಗರದಲ್ಲಿ ಕೊರೋನಾ ಮಾರ್ಗ ಸೂಚಿ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ಪಾವತಿಸದಿರುವ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಡಿಸೆಂಬರ್ 5, 2020ರಂದು ನಗರದ...

ಶಿವಮೊಗ್ಗ ದುರಂತ: ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ

Newsics.com ಬೆಂಗಳೂರು: ದೇಶವನ್ನು ನಡುಗಿಸಿರುವ ಶಿವಮೊಗ್ಗ ಸಮೀಪದ  ಹುಣಸೋಡು ಸ್ಫೋಟ ಸಂಭವಿಸಿದ ಪ್ರದೇಶಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಭೇಟಿ ನೀಡಲಿದ್ದಾರೆ. ದುರಂತದಲ್ಲಿ ಐದು ಮಂದಿ ಮೃತಪಟ್ಟಿರುವುದನ್ನು ಅಧಿಕೃತವಾಗಿ ದೃಢೀಕರಿಸಲಾಗಿದೆ. ಶಿವಮೊಗ್ಗ ನಗರದಿಂದ ಕೇವಲ ಎಂಟು ಕಿಲೋ...
- Advertisement -
error: Content is protected !!