Tuesday, October 4, 2022

ಸೋನು ಗೌಡಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಕಿಚ್ಚ

Follow Us

newsics.com

ಬೆಂಗಳೂರು: ಬಿಗ್​ ಬಾಸ್​ ಕನ್ನಡ ಒಟಿಟಿ ಶೋನ ವಾರದ ಪಂಚಾಯಿತಿಯಲ್ಲಿ ಕಿಚ್ಚ ಸುದೀಪ್ ಅವರ​ ಎದುರಲ್ಲೇ ಸೋನು ಶ್ರೀನಿವಾಸ್​ ಗೌಡ ಗುಡುಗಿದ್ದಾರೆ. ಇದನ್ನು ಗಮನಿಸಿದ ಸುದೀಪ್​ ಅವರು ಖಡಕ್​ ವಾರ್ನಿಂಗ್​ ನೀಡಿದ್ದಾರೆ.

ವೀಕೆಂಡ್​ನಲ್ಲಿ ಕಿಚ್ಚ ಸುದೀಪ್​ ಅವರು ವಾರದ ಪಂಚಾಯಿತಿ ನಡೆಸುತ್ತಿದ್ದರು. ಈ ಎಪಿಸೋಡ್​ನಲ್ಲಿ ಸ್ಪರ್ಧಿಗಳಿಗೆ ವಿವಿಧ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಅದಕ್ಕೆ ಹೌದು ಅಥವಾ ಇಲ್ಲ ಎಂದು ಅವರು ಉತ್ತರ ನೀಡಬೇಕು. ಒಂದು ವೇಳೆ ಸ್ಪರ್ಧಿಗಳ ಉತ್ತರಕ್ಕೆ ವಿವರಣೆ ಬೇಕಿದ್ದರೆ ಸುದೀಪ್​ ಕೇಳುತ್ತಾರೆ. ಈ ವಾರದ ಎಪಿಸೋಡ್​ನಲ್ಲೂ ಅದು ನಡೆದಿದೆ. ಈ ವೇಳೆ ಸೋನು ಗೌಡ ಸಿಡಿಮಿಡಿ ಮಾಡಿದ್ದಾರೆ.

ನೀವು ತಮಾಷೆ ಮಾಡಿದಾಗ ಬೇರೆಯವರು ನಗುತ್ತಾರೆ. ಆದರೆ ಬೇರೆಯವರು ನಿಮಗೆ ತಮಾಷೆ ಮಾಡಬಾರದು ಎಂದರೆ ಅದು ಸರಿಯಲ್ಲ. ಈ ಹಿಂದೆ ನೀವು ಬೇರೆಯವರಿಗೆ ತಮಾಷೆ ಮಾಡಿದಾಗ ಅವರು ಕೂಡ ಹೀಗೆಯೇ ರೇಗಾಡಬಹುದಿತ್ತಲ್ಲ. ಇನ್ಮುಂದೆ ನೀವು ಬೇರೆಯವರಿಗೆ ಲೇವಡಿ ಮಾಡುವಂತಿಲ್ಲ. ನೀವು ಹೀಗೆ ಮಾಡಿದ್ರೆ ಈ ಶೋ ನಡೆಯಲ್ಲ. ಯೆಸ್​ ಅಥವಾ ನೋ ರೌಂಡ್​ ಇಲ್ಲಿಗೆ ಮುಗಿಯಿತು’ ಎಂದು ಸುದೀಪ್​ ಹೇಳಿದ್ದಾರೆ.

ಕೋಲಾರದಲ್ಲಿ ಹಾರಲು ಸಿದ್ಧವಾಯ್ತು ದೇಶದ ಅತಿ ದೊಡ್ಡ ರಾಷ್ಟ್ರಧ್ವಜ

ಮತ್ತಷ್ಟು ಸುದ್ದಿಗಳು

vertical

Latest News

ಹೊಸ ರಾಷ್ಟ್ರೀಯ ಪಕ್ಷ ಅನಾವರಣ, ಸ್ಥಳೀಯರಿಗೆ ಮದ್ಯದ ಬಾಟಲಿ, ಕೋಳಿ!

newsics.com ತೆಲಂಗಾಣ: ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್‌ ರಾವ್‌ ವಿಜಯದಶಮಿಯ ನಿಮಿತ್ತ ಹೊಸ ರಾಷ್ಟ್ರೀಯ ಪಕ್ಷವನ್ನು ಬುಧವಾರ ಅನಾವರಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಆರ್‌ಎಸ್‌ ನಾಯಕನೊಬ್ಬ ಸಾರ್ವಜನಿಕವಾಗಿ ಸ್ಥಳೀಯ ಜನರಿಗೆ...

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆ ಮೇಲೆ ಎಚ್ಚರಿಕೆಯ ಬರಹ ಬರೆಯಲಾಗಿದೆ....

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...
- Advertisement -
error: Content is protected !!