Saturday, April 17, 2021

ಶುಭಾ ಪೂಂಜಾಗೆ ಕೂಡಿಬಂದ ಕಂಕಣ

 ಮೊಗ್ಗಿನ ಮನಸ್ಸು ಚಿತ್ರದ ಮೂಲಕ ಸ್ಯಾಂಡಲ್’ವುಡ್’ನಲ್ಲಿ ಗುರುತಿಸಿಕೊಂಡ ನಟಿ ಶುಭಾ ಪೂಂಜಾ ಕೊರೋನಾ ಭೀತಿಯ ನಡುವೆ ವೈವಾಹಿಕ ಬದುಕಿಗೆ ಕಾಲಿಡಲಿದ್ದಾರೆ.
ಶುಭಾಪೂಂಜಾ ತಮ್ಮ ಪ್ರಿಯಕರ ಸುಮಂತ ಮಹಾಬಲ ಜತೆ ಹೊಸ ಬದುಕು ಆರಂಭಿಸಲಿದ್ದು ಇನ್ನೇನು ಮದುವೆ ದಿನಾಂಕ ಘೋಷಣೆಯೊಂದೇ ಬಾಕಿ ಇದೆ.
ಸುಮಂತ ಮಹಾಬಲ ಉದ್ಯಮಿಯಾಗಿದ್ದು, ಜತೆಗೆ ಮುತ್ತಪ್ಪ ರೈ ಜಯ ಕರ್ನಾಟಕ ಸಂಘಟನೆಯ ಬೆಂಗಳೂರು ಸೌತ್ ವಿಂಗ್ ಪ್ರೆಸಿಡೆಂಟ್ ಆಗಿದ್ದಾರೆ.
ಕಳೆದ ಒಂದು ವರ್ಷದಿಂದ ಶುಭಾ ಹಾಗೂ ಸುಮಂತ ಪರಸ್ಪರ ಪ್ರೀತಿಸುತ್ತಿದ್ದು, ಎರಡು ಕುಟುಂಬದ ಅನುಮತಿ ಪಡೆದು ಸದ್ಯದಲ್ಲೇ ಮದುವೆಯಾಗಲಿದ್ದಾರೆ.
ಜಾಕ್‌ ಪಾಟ್ ಸಿನಿಮಾದ ಮೂಲಕ ಸ್ಯಾಂಡಲ್’ವುಡ್’ಗೆ ಕಾಲಿಟ್ಟ ಶುಭಾ ಪೂಂಜಾ ತಮ್ಮ ಬೋಲ್ಡ್ ಆಕ್ಟಿಂಗ್ ಮೂಲಕ ಮನಸೆಳೆದಿದ್ದು ಇದುವರೆಗೂ 20ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದಾರೆ. ತಮಿಳು ಚಿತ್ರರಂಗದಲ್ಲೂ ಶುಭಾ ಹೆಸರು ಗಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!