newsics.com
ಮುಂಬೈ: ಕೊರೋನಾ ಮಹಾಮಾರಿಯ ಕಾರಣದಿಂದ ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಕಾರಣದಿಂದಾಗಿ ನನ್ನ ಕೋಣೆಗೆ ಕೇವಲ ಕುಟುಂಬ ಸದಸ್ಯರ ಪ್ರವೇಶಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಇದರಿಂದ ಸಹಜವಾಗಿಯೇ ನನ್ನ ಇತರ ಪ್ರೀತಿಪಾತ್ರರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ನೋವಾಗಿದೆ.
ಆದರೆ ಆರೋಗ್ಯ ಅತೀ ಮುಖ್ಯವಾಗಿದೆ. ಎಲ್ಲರೂ ಮುನ್ನೆಚ್ಚರಿಕೆ ವಹಿಸಿ.. ಕೊರೋನಾ ತಡೆ ಲಸಿಕೆ ಹಾಕಿಸಿಕೊಳ್ಳಿ ಎಂದು ಲತಾ ಮಂಗೇಶ್ಕರ್ ಮನವಿ ಮಾಡಿದ್ದಾರೆ.
ಮುಂಬೈಯಲ್ಲಿ ನೆಲೆಸಿರುವ ಲತಾ ಮಂಗೇಶ್ಕರ್, ತಮ್ಮ ಕಂಠ ಸಿರಿಯಿಂದಾಗಿ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದಾರೆ.