Tuesday, October 4, 2022

ಆಸ್ಪತ್ರೆಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ ಪ್ರಶಾಂತ್ ನೀಲ್

Follow Us

newsics.com

ಬೆಂಗಳೂರು: ತಂದೆಯ ಸ್ಮರಣಾರ್ಥವಾಗಿ ನಿರ್ದೇಶಕ ಪ್ರಶಾಂತ್ ನೀಲ್ ಸ್ವಗ್ರಾಮದಲ್ಲಿರುವ ಆಸ್ಪತ್ರೆಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.

ಪ್ರಶಾಂತ್ ನೀಲ್ ಹುಟ್ಟೂರು ಅನಂತಪುರ ಜಿಲ್ಲೆಯ ಮಡಕಶಿರಾ ಕ್ಷೇತ್ರದ ನೀಲಕಂಠಪುರ. ಇವರ ತಂದೆ ಸುಭಾಷ್ ರೆಡ್ಡಿ ಅವರು ಕೆಲವು ತಿಂಗಳ ಹಿಂದೆ ನಿಧನರಾದರು, ಅವರ ಸಮಾಧಿಯನ್ನು ನೀಲಕಂಠಪುರಂನಲ್ಲೇ ನಿರ್ಮಿಸಲಾಗಿದೆ. 75ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ತಂದೆಯ 75ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಶಾಂತ್ ನೀಲ್ ಹುಟ್ಟೂರಿಗೆ ಆಗಮಿಸಿ ಅಲ್ಲಿನ ದೇವಸ್ಥಾನಕ್ಕೂ ಭೇಟಿ ನೀಡಿದರು.

ಬಳಿಕ ನೀಲಕಂಠಪುರಂನಲ್ಲಿರುವ ಎಲ್.ವಿ ಪ್ರಸಾದ್ ನೇತ್ರಾಲಯಕ್ಕೆ ಭೇಟಿ ನೀಡಿ ತಂದೆಯ ನೆನಪಿಗಾಗಿ 50 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಪ್ರಶಾಂತ್ ನೀಲ್ ಘೋಷಿಸಿದ್ದಾರೆ.

ಪ್ರಶಾಂತ್ ನೀಲ್ ಅವರ ತಾತ, ಅಪ್ಪಂದಿರೆಲ್ಲ ಇಲ್ಲೇ ವಾಸವಾಗಿದ್ದರು. ಹಿರಿಯ ಕಾಂಗ್ರೆಸ್ ನಾಯಕ ರಘುವೀರ್ ರೆಡ್ಡಿ ಪ್ರಶಾಂತ್ ನೀಲ್ ಚಿಕ್ಕಪ್ಪ. ಪ್ರಶಾಂತ್ ನೀಲ್ ಆಗಾಗ ತನ್ನ ಊರಿಗೆ ಬಂದು ಹೋಗುತ್ತಿರುತ್ತಾರೆ. ಈ ಬಾರಿ ಅಲ್ಲಿನ ಆಸ್ಪತ್ರೆಗೆ ದೇಣಿಗೆ ನೀಡಿ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.

Amul, Mother Dairy ಹಾಲಿನ ದರ ಲೀಟರ್‌ಗೆ 2 ರೂ. ಹೆಚ್ಚಳ

ಮತ್ತಷ್ಟು ಸುದ್ದಿಗಳು

vertical

Latest News

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...

ಡಿಜಿಪಿ ಹೇಮಂತ್ ಲೋಹಿಯಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಬಂಧನ

newsics.com ಜಮ್ಮು: ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ  ಹೇಮಂತ್ ಲೋಹಿಯಾ ಹತ್ಯೆ ಪ್ರಕರಣದ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ.  ಜಮ್ಮುವಿನ ಮನೆಯಲ್ಲಿ  ಪೊಲೀಸ್ ಮಹಾ ನಿರ್ದೇಶಕ ಶ್ರೇಣಿಯ  ಹೇಮಂತ್ ಲೋಹಿಯಾ ಅವರನ್ನು ಬರ್ಬರವಾಗಿ ಹತ್ಯೆ...
- Advertisement -
error: Content is protected !!