ಚಂಢೀಗಢ: ಹಿಂಸೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯವನ್ನು ವೈಭವೀಕರಿಸಿದೆ ಎಂಬ ಆರೋಪಕ್ಕೆ ತುತ್ತಾಗಿರುವ ಶೂಟರ್ ಚಲನಚಿತ್ರವನ್ನು ಪಂಜಾಬ್ ಸರ್ಕಾರ ನಿಷೇಧಿಸಿದೆ. ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಈ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಇದು ಅನಿವಾರ್ಯ ಎಂದು ಅವರು ಹೇಳಿದ್ದಾರೆ.