Thursday, May 26, 2022

ರಚಿತಾ ರಾಮ್ ಬಣ್ಣದ ಬದುಕಿಗೆ 9 ವರ್ಷ

Follow Us

ಡಿಂಪಲ್ ಕ್ವೀನ್‌ನ ಬಣ್ಣದ ಪಯಣಕ್ಕೆ ಒಂಭತ್ತರ ಹರೆಯ. ಬುಲ್ ಬುಲ್ ಸಿನಿಮಾ ಮೂಲಕ ಹಿರಿತೆರೆಗೆ ಪದಾರ್ಪಣೆ ಮಾಡಿದ ರಚಿತಾ ರಾಮ್ ಯಶಸ್ವಿ ಒಂಭತ್ತು ವರ್ಷ ಪೂರೈಸಿದ್ದಾರೆ. ಈ ಸಂತಸದ ವಿಚಾರವನ್ನು ಇನ್ ಸ್ಟಾಗ್ರಾಂ ಖಾತೆಯಲ್ಲಿ ಸ್ವತಃ ರಚಿರಾ ಅವರೇ ಹಂಚಿಕೊಂಡಿದ್ದಾರೆ.

• ಅನಿತಾ ಬನಾರಿ
newsics.com@gmail.com

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅರಸಿ ಧಾರಾವಾಹಿಯ ಮೂಲಕ ಕಿರುತೆರೆ ಪಯಣ ಶುರು ಮಾಡಿದ್ದ ರಚಿತಾ ರಾಮ್ ನಂತರ ಹಿರಿತೆರೆಯಲ್ಲಿ ಕಾಣಿಸಿಕೊಂಡಿದ್ದೇ ಹೆಚ್ಚು. ಬುಲ್ ಬುಲ್ ಸಿನಿಮಾದ ಕಾವೇರಿಯಾಗಿ ಹಿರಿತೆರೆಗೆ ಹಾರಿದ ಗುಳಿ ಕೆನ್ನೆಯ ಬೆಡಗಿ ಈಗ ಸಂಭ್ರಮದಲ್ಲಿದ್ದಾರೆ.
ಹೌದು, ಡಿಂಪಲ್ ಕ್ವೀನ್‌ನ ಬಣ್ಣದ ಪಯಣಕ್ಕೆ ಒಂಭತ್ತರ ಹರೆಯ. ಬುಲ್ ಬುಲ್ ಸಿನಿಮಾ ಮೂಲಕ ಹಿರಿತೆರೆಗೆ ಪದಾರ್ಪಣೆ ಮಾಡಿದ ರಚಿತಾ ರಾಮ್ ಯಶಸ್ವಿ ಒಂಭತ್ತು ವರ್ಷ ಪೂರೈಸಿದ್ದಾರೆ. ಈ ಸಂತಸದ ವಿಚಾರವನ್ನು ಇನ್ ಸ್ಟಾಗ್ರಾಂ ಖಾತೆಯಲ್ಲಿ ಸ್ವತಃ ರಚಿರಾ ಅವರೇ ಹಂಚಿಕೊಂಡಿದ್ದಾರೆ.

ತಾನು ನಾಯಕಿಯಾಗಿ ಅಭಿನಯಿಸಿದ ಮೊದಲ ಸಿನಿಮಾದ ಪೋಸ್ಟರ್ ಅನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ರಚಿತಾ ರಾಮ್ “ಇದು ನನ್ನ ದೀರ್ಫ ಪ್ರಯಾಣದ ಮೊದಲ ಹೆಜ್ಜೆ. ಈ ಮೊದಲ ಹೆಜ್ಜೆಗೆ ಈಗ ಓಂಭತ್ತರ ಹರೆಯ‌. ತುಂಬಾ ಸಂತಸವಾಗುತ್ತಿದೆ‌. ನೀವು ನನಗೆ ನೀಡಿದ ಪ್ರೀತಿಗೆ, ಅಭಿಮಾನಕ್ಕೆ ನಾನು, ನನ್ನ ಕುಟುಂಬ ಸದಾ ಋಣಿಯಾಗಿರುತ್ತೇವೆ. ನಿಮ್ಮ ಆಶೀರ್ವಾದ ನನ್ನ ಮೇಲೆ ಯಾವತ್ತಿಗೂ ಹೀಗೆ ಇರಲಿ” ಎಂದು ಬರೆದುಕೊಂಡಿದ್ದಾರೆ.
ಸದ್ಯ ಕನ್ನಡ ಸಿನಿಮಾ ರಂಗದಲ್ಲಿ ಬೇಡಿಕೆಯ ನಟಿಯಾಗಿರುವ ರಚಿತಾ ರಾಮ್ ಇತ್ತೀಚೆಗೆ ಬಿಡುಗಡೆಯಾಗಿರುವ ಏಕ್ ಲವ್ ಯಾ ಹಾಗೂ ಜೇಮ್ಸ್ ಚಿತ್ರಗಳಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದರು.
ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಮಜಾಭಾರತ ಕಾರ್ಯಕ್ರಮದ ತೀರ್ಪುಗಾರ್ತಿಯಾಗಿ ಕಾಣಿಸಿಕೊಳ್ಳುವ ಮೂಲಕ ಕಿರುತೆರೆಗೆ ಮತ್ತೆ ಕಾಲಿಟ್ಟಿದ್ದ ಗುಳಿ ಕೆನ್ನೆಯ ಚೆಲುವೆಯನ್ನು ಕಿರುತೆರೆ ವೀಕ್ಷಕರು ಕೂಡ ಮೆಚ್ಚಿಕೊಂಡಿದ್ದರು. ಇದರ ಜತೆಗೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಡ್ರಾಮಾ ಜ್ಯೂನಿಯರ್ಸ್ ಸೀಸನ್ 4 ರ ತೀರ್ಪುಗಾರ್ತಿಯಾಗಿ ಆಯ್ಕೆ ಆಗಿರುವ ರಚಿತಾ ರಾಮ್ ಹಿರಿತೆರೆ ಜೊತೆಗೆ ಕಿರುತೆರೆಯನ್ನು ಬ್ಯಾಲೆನ್ಸ್ ಮಾಡಿಕೊಂಡು ಹೋಗುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!