Saturday, April 17, 2021

ಅಮಿತಾಭ್ ಬಚ್ಚನ್ ಜತೆ ನಟಿಸುವ ಅವಕಾಶ: ರಶ್ಮಿಕಾ ಪುಲ್ ಖುಷ್

newsics.com

ಮುಂಬೈ: ನಟಿ ರಶ್ಮಿಕಾ ಮಂದಣ್ಣ ಸಂತಸದ ಅಲೆಯಲ್ಲಿ ತೇಲಾಡುತ್ತಿದ್ದಾರೆ. ಮೇರು ನಟ ಅಮಿತಾಭ್ ಬಚ್ಚನ್ ಜತೆ ನಟಿಸಲು ಅವಕಾಶ  ದೊರೆತಿರುವುದೇ ಇದಕ್ಕೆ ಕಾರಣ.

ಇಷ್ಟು ಬೇಗ ನನ್ನ ವೃತ್ತಿ ಜೀವನದಲ್ಲಿ ಅಮಿತಾಭ್ ಬಚ್ಚನ್ ರಂತಹ ಹಿರಿಯ ಕಲಾವಿದರ ಜತೆ ಅಭಿನಯಿಸಲು ಅವಕಾಶ ದೊರೆಯಬಹುದು ಎಂದು ನಿರೀಕ್ಷಿಸಿರಲಿಲ್ಲ. ಇದು ನನಸಾಗಿದೆ. ನನ್ನ ಸಂತಸಕ್ಕೆ ಪಾರವೇ ಇಲ್ಲ ಎಂದು ರಶ್ಮಿಕಾ ಮಂದಣ್ಣ ಪ್ರತಿಕ್ರಿಯಿಸಿದ್ದಾರೆ.

ಗುಡ್ ಬೈ ಎಂಬ ಹೆಸರಿನ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಜತೆ ನಟಿಸಲು ರಶ್ಮಿಕಾ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಆಲ್ ದಿ ಬೆಸ್ಟ್  ರಶ್ಮಿಕಾ

ಉತ್ತರಾಖಂಡ್ ನಲ್ಲಿ ಕಾಡ್ಗಿಚ್ಚು: ನಾಲ್ಕು ಮಂದಿ ಜೀವಂತ ದಹನ

 

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!