ಹೈದರಾಬಾದ್: ನಟಿ ರಾಶಿ ಖನ್ನಾ ತುಂಬಾ ಖುಷಿಯಲ್ಲಿದ್ದಾರೆ. ವಿಜಯ ದೇವರಕೊಂಡ ನಾಯಕನಾಗಿ ನಟಿಸಿರುವ ವರ್ಲ್ಡ್ ಫೇಮಸ್ ಲವರ್ ಚಿತ್ರ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ. ರಾಶಿ ಖನ್ನಾ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ತಮ್ಮ ಸಂತಸವನ್ನು ರಾಶಿ ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ.