ಮುಂಬೈ: ನಟಿ ಸಾರಾ ಆಲಿ ಖಾನ್ ಅವರ ಕಾರು ಚಾಲಕನಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಸಾರಾ ಆಲಿ ಖಾನ್ ಸಾಮಾಜಿಕ ಜಾಲ ತಾಣದ ಮೂಲಕ ಇದನ್ನು ಬಹಿರಂಗಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ಕೂಡ ಕೊರೋನಾ ಪರೀಕ್ಷೆಗೆ ಒಳಗಾಗಿದ್ದೇನೆ. ನನ್ನ ವರದಿ ನೆಗೆಟಿವ್ ಬಂದಿದೆ ಎಂದು ಸಾರಾ ಹೇಳಿದ್ದಾರೆ.
ಕೊರೋನಾ ಹಿಂದಿ ಚಿತ್ರರಂಗದ ಮೇಲೆ ದಾಳಿ ನಡೆಸಿದೆ. ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ ಬಚ್ಚನ್ ಮತ್ತು ಅನುಪಮ್ ಖೇರ್ ಅವರ ಸಹೋಹದರ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.