newsics.com
ಮುಂಬೈ: ಅಶ್ಲೀಲ ಚಿತ್ರಗಳನ್ನು ಅಪ್ ಲೋಡ್ ಮಾಡಿದ ಪ್ರಕರಣ ಸಂಬಂಧ ನಟಿ ಶೆರ್ಲಿನ್ ಚೋಪ್ರಾ ಬಂಧನದ ಭೀತಿ ಎದುರಿಸುತ್ತಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ನಟಿ ಶೆರ್ಲಿನ್ ಚೋಪ್ರಾ , ಬಾಂಬೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಸೋಮವಾರ, ಫೆಬ್ರವರಿ 22ರಂದು ಬಾಂಬೆ ಹೈಕೋರ್ಟ್ ನಲ್ಲಿ ಈ ಅರ್ಜಿಯ ವಿಚಾರಣೆ ನಡೆಯಲಿದೆ.
ನ್ಯಾಯಮೂರ್ತಿ ಪಿ ಡಿ ನಾಯಕ್ ನೇತೃತ್ವದ ಪೀಠ ಈ ಅರ್ಜಿ ವಿಚಾರಣೆ ನಡೆಸಲಿದೆ. ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಈಗಾಗಲೇ ತಳ್ಳಿಹಾಕಿದೆ. ಈ ಹಿನ್ನೆಲೆಯಲ್ಲಿ ಬಾಂಬೆ ಹೈಕೋರ್ಟ್ ನಲ್ಲಿ ಶೆರ್ಲಿನ್ ಚೋಪ್ರಾ ಅರ್ಜಿ ಸಲ್ಲಿಸಿದ್ದಾರೆ.
ಮುಂಬೈ ಪೊಲೀಸ್ ಇಲಾಖೆಯ ಸೈಬರ್ ದಳ ಈ ಸಂಬಂಧ ಪ್ರಕರಣ ದಾಖಲಿಸಿದೆ. ಸೋಮವಾರ ಅರ್ಜಿ ವಿಚಾರಣೆ ನಡೆಯುವ ತನಕ ಶೆರ್ಲಿನ್ ಚೋಪ್ರಾ ಅವರನ್ನು ಬಂಧಿಸುವುದಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಫೆಬ್ರವರಿ 22ರಂದು ಬಾಂಬೆ ಹೈಕೋರ್ಟ್ ನೀಡಲಿರುವ ತೀರ್ಪು ಮಹತ್ವ ಪಡೆದುಕೊಂಡಿದೆ.