Tuesday, July 5, 2022

ಮಹಾಭಾರತದ ‘ಅಶ್ವತ್ಥಾಮ’ನಾಗಲಿದ್ದಾರೆ ಹ್ಯಾಟ್ರಿಕ್ ಹೀರೋ

Follow Us

newsics.com
ಬೆಂಗಳೂರು: ಮಹಾಭಾರತದ ‘ಅಶ್ವತ್ಥಾಮ’ನಾಗಲು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಸಿದ್ಧರಾಗುತ್ತಿದ್ದಾರೆ.
ಹೌದು, ಶಿವರಾಜ್‌ ಕುಮಾರ್‌ “ಅಶ್ವತ್ಥಾಮ’ ಎಂಬ ಸಿನಿಮಾ ಮಾಡಲಿದ್ದಾರೆ. ಈಗ ಈ ಚಿತ್ರ ಸೆಟ್ಟೇರುವ ಹಂತಕ್ಕೆ ಬಂದಿದೆ. ಚಿತ್ರ ಸೆಪ್ಟೆಂಬರ್‌ನಿಂದ ಆರಂಭವಾಗುವ ಸಾಧ್ಯತೆ ಹೆಚ್ಚಿದೆ.
“ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ಸಚಿನ್‌ ಈ ಚಿತ್ರ ನಿರ್ದೇಶಿಸುತ್ತಿದ್ದು, ನಿರ್ಮಾಣದ ಜವಾಬ್ದಾರಿಯನ್ನೂ ಸಚಿನ್ ಅವರೇ ಹೊರಲಿದ್ದಾರೆ.
ಸಿನಿಮಾದಲ್ಲಿ ಶಿವಣ್ಣ ಮಹಾಭಾರತದ ಅಶ್ವತ್ಥಾಮನಾಗಿ ಬಣ್ಣ ಹಚ್ಚಲಿದ್ದು, ಇದೊಂದು ಆಕ್ಷನ್‌-ಸ್ಪೈ ಥ್ರಿಲ್ಲರ್‌ ಕಥಾಹಂದರ ಒಳಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಅಮರತ್ವ ಪಡೆದಿರುವ ಅಶ್ವತ್ಥಾಮನ ಸುತ್ತ ಸಾಗುವ ಇಡೀ ಕಥೆಯಲ್ಲಿ ಶಿವಣ್ಣ ಸೂಪರ್‌ ಹೀರೋ ಆಗಿ ಕಾಣಿಸಲಿದ್ದಾರೆ. ಚಿತ್ರದಲ್ಲಿ ಗ್ರಾಫಿಕ್‌ಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ಇನ್ನು, ಶಿವರಾಜ್‌ಕುಮಾರ್‌ ನಟಿಸಿರುವ ‘ಬೈರಾಗಿ’ ಚಿತ್ರ ಬಿಡುಗಡೆಯ ಹಂತದಲ್ಲಿದ್ದು, ‘ವೇದ’ ಚಿತ್ರದ ಚಿತ್ರೀಕರಣ ನಡೆಯುತ್ತಿದೆ

ಬಹುಭಾಷಾ ನಟ ಕ್ಯಾಪ್ಟನ್ ಚಲಪತಿ ಚೌದ್ರಿ ಇನ್ನಿಲ್ಲ

ಕಿರುತೆರೆ ನಟಿ ಚೇತನಾ ರಾಜ್ ಸಾವು: ಆಸ್ಪತ್ರೆಗೆ ಬೀಗ

ಮತ್ತಷ್ಟು ಸುದ್ದಿಗಳು

vertical

Latest News

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ  ಕೊಲೆ ಮಾಡಲಾಗಿದೆ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಂದ್ರಶೇಖರ್ ಗುರೂಜಿ ಅವರನ್ನು ಚಾಕುವಿನಿಂದ...
- Advertisement -
error: Content is protected !!