Tuesday, April 13, 2021

ಮಗಳು ಜಾನಕಿ‌ ವೀಕ್ಷಕರಿಗೆ ಶಾಕ್..!

ನ್ನಡದ ಜನಪ್ರಿಯ ಧಾರಾವಾಹಿ ಮಗಳು ಜಾನಕಿ ವೀಕ್ಷಕರಿಗೆ ಧಾರಾವಾಹಿ ನಿರ್ದೇಶಕ ಟಿ.ಎನ್.ಸೀತಾರಾಮ್ ಶಾಕ್ ನೀಡಿದ್ದಾರೆ.
ಖಾಸಗಿ ವಾಹಿನಿ ತಾತ್ಕಾಲಿಕವಾಗಿ ಸ್ಥಗಿತಗೊಳ್ಳುತ್ತಿರುವುದರಿಂದ ಧಾರಾವಾಹಿ ಪ್ರಸಾರ ಮುಂದುವರಿಯುವುದಿಲ್ಲ ಎಂಬ ಮುನ್ಸೂಚನೆ ನೀಡಿದ್ದಾರೆ.
ಜೂನ್ 1ರಿಂದ ಎರಡು ವಾರ ಈಗಾಗಲೇ ಚಿತ್ರೀಕರಿಸಲಾಗಿರುವ ಮಗಳು ಜಾನಕಿ ಎಪಿಸೋಡುಗಳನ್ನು ಪ್ರಸಾರ ಮಾಡುತ್ತಿದ್ದೇವೆ. ಅದನ್ನು ವೀಕ್ಷಿಸಿ ಎಂದು ಮನವಿ‌ ಮಾಡಿದ್ದಾರೆ.
ತಮ್ಮ ಫೇಸ್’ಬುಕ್ ಅಕೌಂಟ್’ನಲ್ಲಿ ಪೋಸ್ಟ್ ಹಾಕಿರುವ ಸೀತಾರಾಮ್ ಅವರು, ಕಲರ್ಸ್ ಸೂಪರ್ ವಾಹಿನಿ ತಾತ್ಕಾಲಿಕವಾಗಿ ಅಕ್ಟೋಬರ್’ವರೆಗೆ ಸ್ಥಗಿತಗೊಳ್ಳುತ್ತಿದೆ ಎಂಬುದನ್ನು ಉಲ್ಲೇಖಿಸಿ, ಈ ಮಾಹಿತಿ ಹಂಚಿಕೊಂಡಿದ್ದಾರೆ.
ತಮ್ಮ ಸೀರಿಯಲ್’ಗೆ ನೀವು ತೋರಿರುವ ಪ್ರೀತಿ ಕಂಡು ಹೃದಯ ಆರ್ದ್ರಗೊಂಡಿದೆ ಎಂದಿರುವ ಸೀತಾರಾಮ್, ಬೇರೆ ವಾಹಿನಿಯಲ್ಲಿ ಸೀರಿಯಲ್ ಮುಂದುವರಿಸಲು ಸಾಧ್ಯವಿಲ್ಲ ಎಂಬುದನ್ನು ತಮ್ಮ ಪೋಸ್ಟ್’ನಲ್ಲಿ ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!