Wednesday, July 6, 2022

ಶ್ರದ್ಧಾ ಶ್ರೀನಾಥ್‌ಗೆ ರಕ್ಷಿತ್ ಶೆಟ್ಟಿ ಜೊತೆ ನಟಿಸುವ ಬಯಕೆ

Follow Us

ಕನ್ನಡ ಸಿನಿಮಾ ರಂಗದಲ್ಲಿ ಅಲ್ಲದೇ ಪರಭಾಷೆಯ ಸಿನಿಮಾ ಕ್ಷೇತ್ರದಲ್ಲಿಯೂ ಇದೀಗ ಚಾರ್ಲಿಯದ್ದೇ ಹವಾ. ಬಾಕ್ಸ್ ಆಫೀಸ್‌ನಲ್ಲಿಯೂ ಅಷ್ಟೇ, ಸಖತ್ ಸದ್ದು ಮಾಡುತ್ತಿರುವ ಈ ಚಿತ್ರದ ಕಥಾಹಂದರಕ್ಕೆ, ರಕ್ಷಿತ್ ಶೆಟ್ಟಿ ಅಭಿನಯಕ್ಕೆ ನಟಿ ಶ್ರದ್ಧಾ ಶ್ರೀನಾಥ್ ಮನ ಸೋತಿದ್ದಾರೆ.

• FEATURE DESK
newsics.com@gmail.com

ಕ್ಷಿತ್ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿರುವ 777 ಚಾರ್ಲಿ ಸಿನಿಮಾವನ್ನು ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳ ತನಕ ಎಲ್ಲರೂ ಮನಸಾರೆ ಮೆಚ್ಚಿಕೊಂಡಿದ್ದಾರೆ. ಜೊತೆಗೆ ಧರ್ಮ ಹಾಗೂ ಚಾರ್ಲಿಯ ನಡುವಿನ ಭಾವನೆಗೆ ಮನ ಸೋತಿದ್ದಾರೆ.

ಭಾವನಾತ್ಮಕ ಸಂದೇಶ ಸಾರುವ ಈ ಸಿನಿಮಾ ವೀಕ್ಷಕರ ಕಣ್ಣಂಚನ್ನು ಒದ್ದೆ ಮಾಡಿದೆ. ಕನ್ನಡ ಸಿನಿಮಾ ರಂಗದಲ್ಲಿ ಅಲ್ಲದೇ ಪರಭಾಷೆಯ ಸಿನಿಮಾ ಕ್ಷೇತ್ರದಲ್ಲಿಯೂ ಇದೀಗ ಚಾರ್ಲಿಯದ್ದೇ ಹವಾ. ಬಾಕ್ಸ್ ಆಫೀಸ್‌ನಲ್ಲಿಯೂ ಅಷ್ಟೇ, ಸಖತ್ ಸದ್ದು ಮಾಡುತ್ತಿರುವ ಈ ಚಿತ್ರದ ಕಥಾಹಂದರಕ್ಕೆ, ರಕ್ಷಿತ್ ಶೆಟ್ಟಿ ಅಭಿನಯಕ್ಕೆ ನಟಿಯೊಬ್ಬರು ಮನ ಸೋತಿದ್ದಾರೆ. ಸಿಂಪಲ್ ಸ್ಟಾರ್ ಜೊತೆಗೆ ನಟಿಸುವ ಇಂಗಿತವನ್ನು ಕೂಡ ಅವರು ಹೊರಹಾಕಿದ್ದಾರೆ.
ಶ್ರದ್ಧಾ ಶ್ರೀನಾಥ್ ಅವರು 777 ಚಾರ್ಲಿ ಸಿನಿಮಾ ನೋಡಿ ರಕ್ಷಿತ್ ಶೆಟ್ಟಿ ನಟನೆಯನ್ನು ಇಷ್ಟಪಟ್ಟಿದ್ದಾರೆ. ಈ ವಿಚಾರವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಶ್ರದ್ಧಾ “ನಾನು ಚಾರ್ಲಿ ಸಿನಿಮಾ ನೋಡಿದೆ. ರಕ್ಷಿತ್ ಶೆಟ್ಟಿ ನಿಮ್ಮ ನಟನೆ ತುಂಬಾ ಸೊಗಸಾಗಿದೆ. ಇದೀಗ ನಾನು ನಿಮ್ಮ ಜೊತೆ ನಟಿಸಲು, ಕೆಲಸ ಮಾಡಲು ಕಾಯುತ್ತಿದ್ದೇನೆ. ಇನ್ನು ಕಿರಣ್ ರಾಜ್ ಅವರ ಈ ಪ್ರಯತ್ನ ಅದ್ಭುತವಾದುದು. ನಿಮ್ಮ ನಿರ್ದೇಶನ ಮಾತ್ರವಲ್ಲ ಬರವಣಿಗೆ ಕೂಡಾ ಉತ್ತಮವಾಗಿ ಮೂಡಿಬಂದಿದೆ” ಎಂದು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

newsics.com ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲೆಗೆ...

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು...

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ ಅವಧಿಗೂ ಮುನ್ನವೇ ಬಿಡುಗಡೆ ಮಾಡಲು ಕೇಂದ್ರ...
- Advertisement -
error: Content is protected !!