newsics.com
ಮುಂಬೈ; ಭಾನುವಾರ ನಡೆದ ವಿಎಲ್ಸಿಸಿ ಫೆಮಿನಾ ಮಿಸ್ ಇಂಡಿಯಾ ಗ್ರ್ಯಾಂಡ್ ಫಿನಾಲೆಯಲ್ಲಿ ಕರ್ನಾಟಕದ ಸಿನಿ ಶೆಟ್ಟಿ (21) ಅವರು ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022 ಪಟ್ಟವನ್ನು ಗೆದ್ದಿದ್ದಾರೆ.
ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಸಮಾರಂಭದಲ್ಲಿ ರಾಜಸ್ಥಾನದ ರೂಬಲ್ ಶೇಖಾವತ್ ಫೆಮಿನಾ ಮಿಸ್ ಇಂಡಿಯಾ 2022 ರ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದರು . ಉತ್ತರ ಪ್ರದೇಶದ ಶಿನಾತಾ ಚೌಹಾನ್ ಅವರು ಫೆಮಿನಾ ಮಿಸ್ ಇಂಡಿಯಾ 2022 ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದರು.
Grateful 🙏🏼
Thanks to each and every one who've supported me in this journey 🥲♥️
Your Miss India 2022 – Sini Shetty
.
.
.#SiniShetty #FeminaMissIndia2022#MissIndia2022 #MissIndia pic.twitter.com/coQkwMMVdc— Sini Shetty (@sini_shetty) July 3, 2022
ನೇಹಾ ಧೂಪಿಯಾ, ಡಿನೋ ಮೋರಿಯಾ ಮತ್ತು ಮಲೈಕಾ ಅರೋರಾ, ವಿನ್ಯಾಸಕರಾದ ರೋಹಿತ್ ಗಾಂಧಿ ಮತ್ತು ರಾಹುಲ್ ಖನ್ನಾ, ನೃತ್ಯ ನಿರ್ದೇಶಕ ಶಿಯಾಮಕ್ ದಾವರ್ ಮತ್ತು ಮಾಜಿ ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್ ತೀರ್ಪುಗಾರರಾಗಿ ಭಾಗವಹಿಸಿದ್ದರು.