newsics.com
ಮೈಸೂರು: ಕಳೆದ ಕೆಲ ದಿನಗಳಿಂದ ವಿವಾದಕ್ಕೆ ಒಳಗಾಗಿರುವ ನಟಿ ಪವಿತ್ರಾ ಲೋಕೇಶ್ ಶನಿವಾರ ರಾತ್ರಿ ನಗರದ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದ್ದಾರೆ.
ತಮ್ಮನ್ನು ಯಾರೋ ಹಿಂಬಾಲಿಸುತ್ತಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಶನಿವಾರ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸುತ್ತಿದ್ದ ವೇಳೆ ತನ್ನನ್ನು ಯಾರೋ ಹಿಂಬಾಲಿಸುತ್ತಿದ್ದಾರೆ. ಹೀಗಾಗಿ ಮೈಸೂರಿಗೆ ಆಗಮಿಸಿದ ತಕ್ಷಣವೇ ಅವರು ನಗರದ ವಿವಿ ಪುರಂ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ತಮ್ಮ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಸುಳ್ಳು ಸುದ್ದಿ ಹಾಗೂ ಮಾನಹಾನಿ ಅಂತಹ ಫೋಟೋಗಳನ್ನು ಹಾಕಲಾಗುತ್ತಿದೆ. ಅಲ್ಲದೇ, ಅಶ್ಲೀಲ ಸಂದೇಶಗಳನ್ನೂ ಕಳುಹಿಸಲಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಜೂ.19ರಂದು ಮೈಸೂರು ಸೈಬರ್ ಠಾಣೆಗೆ ದೂರು ನೀಡಿದ್ದರು.