newsics.com
ಬೆಂಗಳೂರು: ಕಿಚ್ಚ ಸುದೀಪ್ ಮತ್ತೊಮ್ಮೆ ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದು, ಸಲ್ಮಾನ್ ಖಾನ್ ಅಭಿನಯದ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಆಕ್ಷನ್ ಕಟ್ ಸುದೀಪ್ ಸಜ್ಜಾಗಿದ್ದು, ಶೀಘ್ರದಲ್ಲೇ ಅವರನ್ನು ಭೇಟಿಯಾಗಿ ಕಥೆ ಹೇಳಲು ತಯಾರಿ ನಡೆಸುತ್ತಿದ್ದಾರೆ.
“ಒಂದು ಸ್ಕ್ರಿಪ್ಟ್ ಸಿದ್ಧಪಡಿಸಿದ್ದು, ಬಹಳ ಸೂಕ್ಷ್ಮವಾಗಿದೆ. ಇಡೀ ದಕ್ಷಿಣ ಭಾರತಕ್ಕೆ ಈ ಸಿನಿಮಾ ಮಾಡಬೇಕು ಎನ್ನುವ ಆಸೆ ನನ್ನದು. ಈ ಕುರಿತು ಸಲ್ಮಾನ್ ಖಾನ್ ಅವರ ಜೊತೆ ಮಾತನಾಡಿದ್ದೇನೆ” ಎಂದು ಸುದೀಪ್ ಹೇಳಿದ್ದಾರೆ.
“ಸಲ್ಮಾನ್ ಬಳಿಗೆ ಹೋಗಿ ಚರ್ಚಿಸಲಿದ್ದೇನೆ. ಒಪ್ಪುವುದು ಬಿಡುವುದು ಅವರಿಗೆ ಬಿಟ್ಟಿದ್ದು. ನಿರ್ದೇಶಕನಾಗಿ ನಾನು ನನ್ನ ಕಥೆಗೆ ನ್ಯಾಯ ಒದಗಿಸಬೇಕು” ಎಂದು ಕಿಚ್ಚ ಹೇಳಿದ್ದಾರೆ.
ಕಾರ್ಖಾನೆಯಲ್ಲಿ ರಾಸಾಯನಿಕ ಅನಿಲ ಸೋರಿಕೆ: 34 ಮಂದಿ ಆಸ್ಪತ್ರೆಗೆ ದಾಖಲು