Saturday, April 17, 2021

ದಾಂಪತ್ಯ ಜೀವನಕ್ಕೆ ಸಿನಿಮಾ ನಿರ್ದೇಶಕಿ ಸುಮನಾ ಕಿತ್ತೂರು

ಬೆಂಗಳೂರು: ‘ಕಿರಗೂರಿನ ಗಯ್ಯಾಳಿಗಳು’ ಸಿನಿಮಾ ನಿರ್ದೇಶಕಿ ಸುಮನಾ ಕಿತ್ತೂರು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.
ಲಾಕ್’ಡೌನ್ ಹಿನ್ನೆಲೆಯಲ್ಲಿ ಸುಮನಾ ಕಿತ್ತೂರು ಕಳೆದ ತಿಂಗಳು ಸರಳವಾಗಿ ಮದುವೆಯಾಗಿದ್ದಾರೆ. ಶಿವಮೊಗ್ಗ ಮೂಲದ ಸಾಫ್ಟ್ ವೇರ್ ಇಂಜಿನಿಯರ್ ಶ್ರೀನಿವಾಸ್ ಅವರನ್ನು ಮದುವೆಯಾಗಿದ್ದಾರೆ.
ಏಪ್ರಿಲ್ 17ರಂದು ಪುದುಚೇರಿಯಲ್ಲಿರುವ ವರನ ಮನೆಯಲ್ಲಿ ಮದುವೆ ನಡೆದಿದೆ. ಎರಡೂ ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ಮದುವೆಯಾದೆವು ಎಂದು ಸುಮನಾ ಕಿತ್ತೂರು ತಿಳಿಸಿದ್ದಾರೆ.
ಏಪ್ರಿಲ್ 31ಕ್ಕೆ ಲಾಕ್ಡೌನ್ ತೆರವಾಗುತ್ತದೆ. ಕರ್ನಾಟಕದಲ್ಲಿ ಮಂತ್ರ ಮಾಂಗಲ್ಯ ಮದುವೆ ಆಗಬೇಕು ಎಂದುಕೊಂಡಿದ್ದೆವು. ಆದರೆ ಸಾಧ್ಯವಾಗಲಿಲ್ಲ. ಪುದುಚೇರಿಯಲ್ಲಿಯೇ ಮದುವೆ ನಡೆದಿದೆ ಎಂದು ಹೇಳಿದ್ದಾರೆ.
ಕೆಲಸದ ನಿಮಿತ್ತ ಸುಮನಾ ಕಿತ್ತೂರು ಪುದುಚೇರಿಯಲ್ಲಿದ್ದು, ಶಿವಮೊಗ್ಗ ಮೂಲದ ಶ್ರೀನಿವಾಸ್ ಕುಟುಂಬ ಕೂಡ ಪುದುಚೇರಿಯಲ್ಲೇ ಇದೆ. ಸುಮನಾ ಕಿತ್ತೂರು ಮತ್ತು ಶ್ರೀನಿವಾಸ್ ದಂಪತಿ ಮುಂದೆ ಕರ್ನಾಟಕದಲ್ಲಿ ನೆಲೆಸಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!