newsics.com
ವಿಜಯನಗರ: ಇಲ್ಲಿನ ಹೂವಿನಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೆ ರಾಜ್ಯ ಸರ್ಕಾರ 3 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.
ಕಲುಷಿತ ನೀರು ಕುಡಿದು ಸಾವನ್ನಪ್ಪಿರುವುದು ಗಂಭೀರ ವಿಚಾರವಾಗಿದ್ದು, ಹಿರಿಯ ಐಎಎಸ್ ಅಧಿಕಾರಿ ಮನೀಶ್ ಮೌದ್ಗಿಲ್ ನೇತೃತ್ವದಲ್ಲಿ ತನಿಖೆಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಲುಷಿತ ನೀರು ಕುಡಿಯುವ ನೀರಿಗೆ ಹೇಗೆ ಎನ್ನುವ ಕುರಿತು ವರದಿ ಕೊಡಲು ಹೇಳಿದ್ದೇನೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ರಸ್ತೆ ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದರೆ ಸರ್ಕಾರದಿಂದ ನಗದು ಬಹುಮಾನ