
ನವದೆಹಲಿ: ದೆಹಲಿಯ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವಂತೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದೆ.
ಪತ್ರದಲ್ಲಿ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ಹೈದರಾಬಾದ್ ನ ಪಶು ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹಲ್ಲೆಯನ್ನು ಗಮನದಲ್ಲಿರಿಸಿಕೊಂಡು, ಕ್ಷಮಾದಾನದ ಅರ್ಜಿಯನ್ನು ವಜಾಗೊಳಿಸಬೇಕು. ದೇಶದಲ್ಲಿ ಯುವತಿಯರು ಮತ್ತು ಮಹಿಳೆಯರು ಮೇಲೆ ಅಮಾನವೀಯ ಕೃತ್ಯಗಳು ನಡೆಯುತ್ತಿರುವುದರಿಂದ ಆರೋಪಿಯ ಮೇಲೆ ಕರುಣೆ ತೋರಿಸಬಾರದು. ಕ್ಷಮಾದಾನ ತಿರಸ್ಕರಿಸುವುದರಿಂದ ಇತರರಿಗೆ ಎಚ್ಚರಿಕೆಯ ಗಂಟೆಯಾಗಲಿದೆ ಎಂದು ಮನವಿ ಮಾಡಿದ್ದಾರೆ.