ನವದೆಹಲಿ: ಕರ್ನಾಟಕದ 17 ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸಿ ಹಿಂದಿನ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಹೊರಡಿಸಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.

ಆದರೆ, ಇವರ ಅನರ್ಹತೆಯಿಂದ ತೆರವಾಗಿರುವ 15 ಕ್ಷೇತ್ರಗಳಿಗೆ ಡಿಸೆಂಬರ್ ನಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಇವರಿಗೆ ಅವಕಾಶವಿದೆ ಎನ್ನುವ ಮೂಲಕ ಸುಪ್ರೀಂಕೋರ್ಟ್ ಒಂದು ಸಮತೋಲಿತ ತೀರ್ಪು ನೀಡಿದೆ.
ಅನರ್ಹರಿಗೆ ಕಾಲಮಿತಿ ನಿಗದಿಪಡಿಸಲಾಗದು. ಅವರು ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸುವವರೆಗೆ ಮಾತ್ರ ಅನರ್ಹರು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಜತೆಗೆ, ರಾಜೀನಾಮೆ ಸ್ವಯಂಪ್ರೇರಿತವಾಗಿದ್ದರೆ ಒಪ್ಪಿಕೊಳ್ಳಬೇಕು ಎಂಬ ಅಭಿಪ್ರಾಯವನ್ನು ಕೂಡ ನ್ಯಾಯಪೀಠ ವ್ಯಕ್ತಪಡಿಸಿದೆ.