Monday, November 29, 2021

ಅನರ್ಹ ಶಾಸಕರು ನಾಳೆ ಬಿಜೆಪಿ ಸೇರ್ಪಡೆ

Follow Us

ಬೆಂಗಳೂರು:  ಅನರ್ಹ ಶಾಸಕರ ನಾಳೆ ಬಿಜೆಪಿ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಮಲ್ಲೇಶ್ವರಂ ನಲ್ಲಿರುವ ಪಕ್ಷದ ಕಚೇರಿಯಲ್ಲಿ ಕೋರ್‌ಕಮಿಟಿ ಸಭೆ ಬಳಿಕ ಮಾತನಾಡಿದ ಅವರು,ಸುಪ್ರೀಂ ಕೋರ್ಟ್ ತೀರ್ಪು ಬಳಿಕ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಭೇಟಿ ಮಾಡಿ ಅನರ್ಹ ಶಾಸಕರು ಮಾತುಕತೆ ನಡೆಸಿದ್ದಾರೆ ನಾಳೆ ಅವರೆಲ್ಲರೂ ಬಿಜೆಪಿ ಕಚೇರಿಗೆ ಆಗಮಿಸಿ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆ ಅನರ್ಹರ ಪಕ್ಷ ಸೇರ್ಪಡೆ ಕುರಿತು ಮಾತುಕತೆ ನಡೆಸಿದ್ದು 10 ಗಂಟೆಗೆ ಅನರ್ಹರನ್ನು ಕಟೀಲ್ ಬಿಜೆಪಿ ಸದಸ್ಯತ್ವ ನೀಡಿ ಪಕ್ಷಕ್ಕೆ ಸ್ವಾಗತ ಮಾಡಲಿದ್ದಾರೆ ಎಂದರು.

ಉಪ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಕುರಿತು ಇನ್ನೂ ನಿರ್ಧಾರ ಆಗಿಲ್ಲ, ಸಧ್ಯ ಪಕ್ಷ ಸೇರ್ಪಡೆ ನಡೆಯಲಿದ್ದು ನಂತರ ಈ ಬಗ್ಗೆ ಮತ್ತೊಮ್ಮೆ ಸಭೆ ಸೇರಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು‌ ಸಿಎಂ ಸ್ಪಷ್ಟಪಡಿಸಿದರು.

ಮತ್ತಷ್ಟು ಸುದ್ದಿಗಳು

Latest News

ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

newsics.com ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಇಬ್ಬರ ಶವಸಂಸ್ಕಾರ ಮಾಡುವುದನ್ನೇ ಮರೆತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲ, 15 ತಿಂಗಳ ಬಳಿಕ ಎರಡು ಶವಗಳನ್ನು ಹೊರಕ್ಕೆ ತಂದ...

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ದೇವಾಲಯದ ಹತ್ತಿರವೇ ಮಸೀದಿ ಇದ್ದು,...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...
- Advertisement -
error: Content is protected !!