ಗಿರಿದ್: ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕಾಗಿ ಉತ್ತರಪ್ರದೇಶದ ಪ್ರತಿಯೊಂದು ಮನೆಯವರೂ 11 ರೂಪಾಯಿ ಮತ್ತು ಒಂದು ಇಟ್ಟಿಗೆಯನ್ನು ನೀಡಬೇಕು ಎಂದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಅವರು, ಶೀಘ್ರದಲ್ಲೇ ಮಂದಿರ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ. ಇದಕ್ಕಾಗಿ ಸಮಾಜದ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.